


ಹಳೇ ದರೋಜಿ , 08 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಬಳ್ಳಾರಿ ಜಿಲ್ಲಾಧಿಕಾರಿಗಳು ರಾಜ್ಯದ ಕಾಂಗ್ರೆಸ್ ಸರಕಾರದ ಒತ್ತಡದಲ್ಲಿದ್ದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಬಳ್ಳಾರಿಯಲ್ಲಿ ಪಾದಯಾತ್ರೆ ಸಮಾರೋಪ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಮೀನಮೇಷ ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ನಾನು ಸಂಬಂಧಿತರಲ್ಲಿ ಮಾತನಾಡುವೆ. ಶಾಂತಿಯುತವಾಗಿ ನಡೆಯುತ್ತಿರುವ ಪಾದಯಾತ್ರೆಯನ್ನು ಇಡೀ ರಾಜ್ಯ, ದೇಶದ ಜನರು ನೋಡುತ್ತಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳು ಸರಕಾರದ ಒತ್ತಡಕ್ಕೆ ಮಣಿಯದೇ ಅನುಮತಿ ನೀಡಬೇಕು. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ; ಹೋರಾಟ ಮಾಡಲು ಪ್ರತಿಯೊಬ್ಬರಿಗೂ ಹಕ್ಕಿದೆ. ಇದು ಜನಪರ ಹೋರಾಟ ಎಂದು ತಿಳಿಸಿದರು. ‘ಯಾಕೆ ಅನುಮತಿ ನೀಡುವುದಿಲ್ಲ; ನಾನೂ ನೋಡುವೆ. ಕೊಟ್ಟೇ ಕೊಡುತ್ತಾರೆ’ ಎಂದು ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್