ಅರ್ಜಿ ನೀಡಲು ಬಂದ ಮುಖಂಡನಿಗೆ ಕಾಂಗ್ರೆಸ್ ಶಾಸಕರ ದರ್ಪ:ಎಎಪಿ ಆಕ್ರೋಶ
ಕಾಂಗ್ರೆಸ್ ಶಾಸಕ ದರ್ಪ ತೋರಿದ ಆರೋಪ
ಅರ್ಜಿ ನೀಡಲು ಬಂದ ಮುಖಂಡನಿಗೆ ಕಾಂಗ್ರೆಸ್ ಶಾಸಕರ ದರ್ಪ:ಎಎಪಿ ಆಕ್ರೋಶ


ತುಮಕೂರು, 08ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ಅರ್ಜಿ ನೀಡಲು ಬಂದ ಆಮ್ ಆದ್ಮಿ ಪಾರ್ಟಿ (ಆಪ್) ಮುಖಂಡನಿಗೆ ಪಾವಗಡ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕಾರ್ಯಕ್ರಮದ ವೇಳೆ ಅರ್ಜಿ ಸಲ್ಲಿಸಲು ತೆರಳಿದ್ದ ಆಮ್ ಆದ್ಮಿ ಪಾರ್ಟಿಯ ಪಾವಗಡ ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ ಅವರೊಂದಿಗೆ ಶಾಸಕ ವೆಂಕಟೇಶ್ ಅವರು ಅವಾಚ್ಯವಾಗಿ ಮಾತನಾಡಿ ದರ್ಪ ತೋರಿದ್ದಾರೆ ಎಂದು ಆಪ್ ಮುಖಂಡರು ಆರೋಪಿಸಿದ್ದಾರೆ.ಶಾಸಕರ ಒಡೆತನದ ಕ್ರಷರ್ಗೆ ಸಂಬಂಧಿಸಿದಂತೆ ಈ ಹಿಂದೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ದ್ವೇಷದಿಂದ ಆಪ್ ಮುಖಂಡರೊಂದಿಗೆ ಶಾಸಕ ಈ ರೀತಿಯಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಶಾಸಕರ ವರ್ತನೆಗೆ ಆಮ್ ಆದ್ಮಿ ಪಾರ್ಟಿ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಬೇಕಾದ ಜನಪ್ರತಿನಿಧಿಯೇ ಅರ್ಜಿ ನೀಡಲು ಬಂದವರೊಂದಿಗೆ ದರ್ಪದಿಂದ ವರ್ತಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಾಸಕ ಎಚ್.ವಿ. ವೆಂಕಟೇಶ್ ಅವರು ತಕ್ಷಣ ಕ್ಷಮೆಯಾಚಿಸಬೇಕು ಹಾಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಪ್ ಮುಖಂಡರು ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande