ಗಾಯಗೊಂಡ ಚಿರತೆಗೆ ಚಿಕಿತ್ಸೆಗೆ ನೀಡಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ
ತೀವ್ರ ಗಾಯಗೊಂಡು ನರಳಿದ ಚಿರತೆ
davanagere-leopard-injured-after-vehicle-hits-while-crossing-highway-rescue-operation-underway


ದಾವಣಗೆರೆ, 08 ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ಹೆದ್ದಾರಿ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಚಿರತೆಯೊಂದು ಹೆದ್ದಾರಿ ಪಕ್ಕದಲ್ಲಿ ನರಳಾಡಿದ ಘಟನೆ ದಾವಣಗೆರೆ ತಾಲೂಕಿನ ಆನಗೋಡ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಮಂಗಳವಾರ ನಡೆದಿದೆ.

ವಾಹನ ಡಿಕ್ಕಿಯಿಂದ ಚಿರತೆಯ ಎಡಗಣ್ಣು ಹಾಗೂ ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ತೀವ್ರ ನೋವಿನಿಂದ ಚಿರತೆ ಹೆದ್ದಾರಿ ಪಕ್ಕದಲ್ಲಿ ಬಿದ್ದು ಚಡಪಡಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ ಚಿಕಿತ್ಸೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಚಿರತೆಗೆ ಅರವಳಿಕೆ ನೀಡಲು ಸಿಬ್ಬಂದಿ ಮುಂದಾದ ವೇಳೆ ಅದು ಏಕಾಏಕಿ ಅರಣ್ಯ ಇಲಾಖೆ ಸಿಬ್ಬಂದಿ ಮೇಳೆ ದಾಳಿ ನಡೆಸಿದ ಪರಿಣಾಮ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande