ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೆ ಪಾಂಡ್ಯ ಲಭ್ಯ
ದುಬೈ, 26 ಅಕ್ಟೋಬರ್ (ಹಿ.ಸ): ಆ್ಯಂಕರ್ : ಭುಜ ನೋವಿನಿಂದ ಬಳಲುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಚೇತರಿಸಿ ಕೊಳ
ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೆ ಪಾಂಡ್ಯ ಲಭ್ಯ


ದುಬೈ, 26 ಅಕ್ಟೋಬರ್ (ಹಿ.ಸ):

ಆ್ಯಂಕರ್ : ಭುಜ ನೋವಿನಿಂದ ಬಳಲುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಚೇತರಿಸಿ ಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದೇ 31 ರಂದು ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಪಾಂಡ್ಯ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.

ಐಪಿಎಲ್ ಸೇರಿದಂತೆ ಅಭ್ಯಾಸ ಪಂದ್ಯಗಳಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಪಾಕ್ ವಿರುದ್ದದ ಪಂದ್ಯದಲ್ಲಿ ಪಾಂಡ್ಯ ಕೇವಲ 11ರನ್ ಗಳಿಸಿದ್ದರು.

ಹಾರ್ದಿಕ್ ಅವರ ವೈದ್ಯಕೀಯ ವರದಿಗಳು ಕೈಸೇರಿದ್ದು, ಅವರಿಗೆ ಗಂಭೀರ ಗಾಯವಾಗಿಲ್ಲ ಎಂಬುದು ತಿಳಿದು ಬಂದಿದೆ.

ಎರಡನೇ ಪಂದ್ಯಕ್ಕೆ ಹಲವು ದಿನ ಇರುವುದರಿಂದ ಅವರಿಗೆ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ನೀಡಲಾಗುತ್ತದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಕೌಟ್ ಹಂತದಲ್ಲಿ ಬೌಲಿಂಗ್ ಮಾಡುವುದಾಗಿ ಪಾಂಡ್ಯ ಇತ್ತೀಚೆಗೆ ಹೇಳಿದ್ದರು. ಆದರೆ, ಮೊದಲ ಪಂದ್ಯದಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ನ್ಯೂಜಿಲೆಂಡ್ ವಿರುದ್ಧ ಬೌಲಿಂಗ್ ಮಾಡಲಿದ್ದಾರಾ ಎಂಬುದರ ಬಗ್ಗೆ ಬಿಸಿಸಿಐ ಕಾದುನೋಡುವ ತಂತ್ರ ಅನುಸರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯದ ಪರಿಸ್ಥಿತಿಯಲ್ಲಿ ಪಾಂಡ್ಯ ಅವರ ದೈಹಿಕ ಸಮಸ್ಯೆ ತಂಡವನ್ನು ಚಿಂತೆಗೀಡು ಮಾಡಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande