ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಪ್ರಶಸ್ತಿ ಗರಿ
26 ಅಕ್ಟೋಬರ್ (ಹಿ.ಸ): ಕನ್ನಡ ಚಿತ್ರರಂಗದಲ್ಲಿ ಹಲವು ಚಿತ್ರಗಳನ್ನು ನಿರ್ಮಿಸಿದ್ದ ಒಡೆಯರ್ ಮೂವಿಸ್ ಎನ್ನುವ ನಿರ್ಮಾಣ
ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಪ್ರಶಸ್ತಿ ಗರಿ


26 ಅಕ್ಟೋಬರ್ (ಹಿ.ಸ):

ಕನ್ನಡ ಚಿತ್ರರಂಗದಲ್ಲಿ ಹಲವು ಚಿತ್ರಗಳನ್ನು ನಿರ್ಮಿಸಿದ್ದ ಒಡೆಯರ್ ಮೂವಿಸ್ ಎನ್ನುವ ನಿರ್ಮಾಣ ಸಂಸ್ಥೆಯಡಿ ಡೊಳ್ಳು ಚಿತ್ರವನ್ನ ನಿರ್ಮಾಣ ಮಾಡಿದ್ದು, ಈ

ಚಿತ್ರವನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಸಾಗರ್ ಪುರಾಣಿಕ್ ಕಥೆ ಹಾಗೂ ನಿರ್ದೇಶನ ಈ ಸಿನಿಮಾಕ್ಕಿದೆ. ಡೊಳ್ಳು 2020ರಲ್ಲಿ ಸಿಬಿಎಫ್ ಸಿ ಇಂದ ಯು ಸರ್ಟಿಫಿಕೇಟ್

ಪಡೆದಿದ್ದು, ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿದೆ.

ಅಮೆರಿಕದ ಕಲೈಡೊಸ್ಕೋಪ್ ಇಂಡಿಯನ್ ಫಿಲಂ ಫೆಸ್ಟಿವಲ್ ಬಾಸ್ಟನ್ನಲ್ಲಿ ಡೊಳ್ಳು ಮೊದಲ ಪ್ರದರ್ಶನ ಕಂಡು, ಎಲ್ಲ ಪ್ರೇಕ್ಷಕರ ಗಮನ ಸೆಳೆದು ಎಲ್ಲರ ಪ್ರಶಂಸೆ ಪಡೆದಿದೆ. ಡೊಳ್ಳು, ಹೀಗೆ ಇನ್ನೂ ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣಲಿದೆ.

ಢಾಕಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಹಾಗೂ ಡಾಲಸ್ ಸೌತ್ ಏಶಿಯನ್ ಫಿಲಂ ಫೆಸ್ಟಿವಲ್ಗಳಲ್ಲಿ ಈಗಾಗಲೇ ಆಯ್ಕೆಯಾಗಿದೆ. ಇನ್ನೋವೇಟಿವ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಎಂಬ ಒಂದು ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ, ಸರಸ್ವತಿ ಪಿಂಪ್ಳೆ ಫೌಂಡೇಶನ್ನಿಂದ ದಾದಾ ಸಾಹೇಬ್ ಫಾಲ್ಕೆ ಬೆಸ್ಟ್ ಕನ್ನಡ ಫಿಲ್ಮ್ ಎಂಬ ಪ್ರಶಸ್ತಿ ಡೊಳ್ಳುಗೆ ದೊರಕಿದೆ.

ದಾದಾಸಾಹೇಬ್ ಫಾಲ್ಕೆ ಎಂ.ಎಸ್.ಕೆ ಟ್ರಸ್ಟ್ನಿಂದ 1 ಲಕ್ಷ ರೂ. ನಗದು ಬಹುಮಾನ ಸಿಕ್ಕಿದೆ. ಇದು ನಮಗೆ ಬಹಳ ಹೆಮ್ಮೆಯ ವಿಷಯ. ಇನ್ನೂ ಹಲವಾರು ಪ್ರಶಸ್ತಿಗಳು, ಬಹುಮಾನಗಳು ಹಾಗೂ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಳ್ಳುತ್ತೆ ಎಂಬ ವಿಶ್ವಾಸ ನಮಗಿದೆ ಅಂತಾರೆ ನಿರ್ಮಾಪಕ ಪವನ್ ಒಡೆಯರ್.

ಹಿಂದೂಸ್ತಾನ್ ಸಮಾಚಾರ್


 rajesh pande