Custom Heading

ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 11 ಕ್ರೀಡಾಪಟುಗಳ ಶಿಫಾರಸು
27 ಅಕ್ಟೋಬರ್ (ಹಿ.ಸ) ಆ್ಯಂಕರ್ : ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ
ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ  ಪ್ರಶಸ್ತಿಗೆ 11 ಕ್ರೀಡಾಪಟುಗಳನ್


27 ಅಕ್ಟೋಬರ್ (ಹಿ.ಸ)

ಆ್ಯಂಕರ್ : ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 11 ಕ್ರೀಡಾಪಟುಗಳನ್ನು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಿತಿ ಇಂದು (ಬುಧವಾರ) ಶಿಫಾರಸು ಮಾಡಿದೆ.

ಟೋಕಿಯೊ ಒಲಿಂಪಿಕ್ಸ್ 2020 ರಲ್ಲಿ ಜಾವೆಲಿನ್ ಎಸೆತದಲ್ಲಿ ಐತಿಹಾಸಿಕ ಚಿನ್ನದ ಪದಕವನ್ನು ಪಡೆದ ನೀರಜ್ ಚೋಪ್ರಾ, ಒಲಿಂಪಿಕ್ ಪದಕ ಇತರೆ ವಿಜೇತರಾದ ರವಿ ದಹಿಯಾ, ಪಿಆರ್ ಶ್ರೀಜೇಶ್ ಮತ್ತು ಲವ್ಲಿನಾ ಬೊರ್ಗೊಹೈ ಅವರನ್ನು ಸೇರಿದಂತೆ ಒಟ್ಟು 11 ಕ್ರೀಡಾಪಟುಗಳ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ.

ಭಾರತದ ಹಿರಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಹಾಗೂ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಅವರ ಹೆಸರನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ. ಸುನಿಲ್ ಛೆಟ್ರಿ ಭಾರತದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಶಿಫಾರಸು ಮಾಡಿದ ಮೊದಲ ಭಾರತೀಯ ಫುಟ್ಬಾಲ್ ಆಟಗಾರರಾಗಿದ್ದಾರೆ.

2021 ಭಾರತಕ್ಕೆ ವಿಶೇಷ ವರ್ಷವಾಗಿದೆ. ಹಲವಾರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ನಲ್ಲಿ ದೇಶ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾರೆ. ಇನ್ನು ಇದರೊಂದಿಗೆ 35 ಭಾರತೀಯ ಅಥ್ಲೀಟ್ಗಳ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿ ಘೋಷಣೆ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande