ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆ ಬಳ್ಳಾರಿಯಲ್ಲಿ
ಬಳ್ಳಾರಿ, 27 ಅಕ್ಟೋಬರ್ (ಹಿ.ಸ): ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆ, ಹಾನಗಲ್ ಕುಮಾರೇಶ್
ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆ ಬಳ್ಳಾರಿಯಲ್ಲಿ 


ಬಳ್ಳಾರಿ, 27 ಅಕ್ಟೋಬರ್ (ಹಿ.ಸ):

ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆ, ಹಾನಗಲ್ ಕುಮಾರೇಶ್ವರ ಮಹಾಶಿವಯೋಗಿಗಳ 154ನೇ ಪುಣ್ಯ ಜಯಂತಿ ಮತ್ತು ಡಾ. ಭೀಮಣ್ಣ ಖಂಡ್ರೆ ಅವರ ಜನ್ಮ ಶತಾಬ್ಧಿಯ ಆಚರಣೆ ನಗರದ ಬಸವಭವನದಲ್ಲಿ ಅಕ್ಟೋಬರ್ 30 ಮತ್ತು 31 ರಂದು ನಡೆಯಲಿದೆ.

ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ, ಜಿಲ್ಲಾ ಅಧ್ಯಕ್ಷ ಚಾನಾಳು ಶೇಖರ್ ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಬಿಡುಗಡೆ ಮಾಡಿ, ಮಾತನಾಡಿದರು.

117 ವರ್ಷಗಳ ನಂತರ ಬಳ್ಳಾರಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಕಾರ್ಯನಿರ್ವಾಹಕ ಸಮಿತಿಯ ಸಭೆ ನಡೆಯಲಿದೆ. ಸಭೆಯಲ್ಲಿ ಡಾ. ಭೀಮಣ್ಣ ಖಂಡ್ರೆ ಅವರಿಗೆ `ಶ್ರೀ ಶರಣ ಸಕ್ಕರೆ ಕರಡೀಶ ಪ್ರಶಸ್ತಿ' ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ `ಶ್ರೀ ಶರಣ ಬಸವರತ್ನ ಪ್ರಶಸ್ತಿ'ಯನ್ನು ಪ್ರಧಾನ ಮಾಡಿ ಅಭಿನಂದಿಸಿ, ಗೌರವಿಸಲಾಗುತ್ತದೆ ಎಂದರು.

ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ ಚಟುವಟಿಕೆಗಳು ಮತ್ತು ಉದ್ಯೋಗ ಮೇಳವನ್ನು ಬಿಜೆಪಿ ಯುವ ಮುಖಂಡ

ಬಿ.ಎಸ್. ವಿಜಯೇಂದ್ರ ಅವರು ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 31ರ ಭಾನುವಾರ ಬೆಳಗ್ಗೆ ಪೂಜ್ಯ ಹಾನಗಲ್ ಕುಮಾರೇಶ್ವರ ಮಹಾಶಿವಯೋಗಿಗಳ ಭಾವಚಿತ್ರದ ಜೊತೆ ಅಲ್ಲಂ ಸುಮಂಗಳಮ್ಮ ಕಾಲೇಜಿನ ಆವರಣದಿಂದ ಬಸವಭವನದವರೆಗೆ ವಿವಿಧ ಕಲಾತಂಡಗಳಿAದ ಸಾಂಸ್ಕೃತಿಕ ಮೆರವಣಿಗೆಯನ್ನು ನಡೆಸಲಾಗುತ್ತದೆ ಎಂದರು.

ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಕಾರ್ಯನಿರ್ವಾಹಕ ಸಭೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಇನ್ನಿತರೆ ರಾಜ್ಯಗಳ ಘಟಕಗಳ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಎರೆಡು ದಿನಗಳ ಸಭೆಗಳಲ್ಲಿ `ಕೋವಿಡ್-19'ರ ನಿಯಮಗಳನ್ನು ಪಾಲನೆ ಮಾಡಲಾಗುತ್ತದೆ. ಮಾಸ್ಕ್ಬಳಕೆ ಮತ್ತು ಹ್ಯಾಂಡ್ ಸ್ಯಾನಿಟೈಸರ್ಗಳನ್ನು ಬಳಕೆ ಮಾಡಿ, ಪ್ರತಿಯೊಬ್ಬರಲ್ಲೂ ಆರೋಗ್ಯ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು : ಸ್ವಾಗತ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


 rajesh pande