ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ, ಕಬ್ಬಿನ ದರ ಪಾತಾಳಕ್ಕೆ: ಸರ್ಕಾರದ ವಿರುದ್ಧ ರೈತರು ಆಕ್ರೋಶ
27 ಅಕ್ಟೋಬರ್ (ಹಿ.ಸ): ಆ್ಯಂಕರ್ : ಅವೈಜ್ಞಾನಿಕವಾಗಿ ಕಬ್ಬಿನ ದರ ನಿಗದಿಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ಕಬ್ಬ
ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ, ಕಬ್ಬಿನ ದರ ಪಾತಾಳಕ್ಕೆ: ಸರ್ಕಾರದ ವಿರುದ್ಧ ರೈತರು ಆಕ್ರೋಶ


27 ಅಕ್ಟೋಬರ್ (ಹಿ.ಸ): ಆ್ಯಂಕರ್ :

ಅವೈಜ್ಞಾನಿಕವಾಗಿ ಕಬ್ಬಿನ ದರ ನಿಗದಿಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ಕಬ್ಬು ಬೆಳೆಗಾರರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಆಯುಕ್ತರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಥಣಿ ತಾಲೂಕಿನಲ್ಲಿ ರೈತರು ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಾರೆ. ಈ ಭಾಗದ ಕಬ್ಬು ಸರಾಸರಿ 11 ರಿಂದ 12.5 ರಷ್ಟು ಸಕ್ಕರೆ ಅಂಶವನ್ನು ಹೆಚ್ಚಾಗಿ ಹೊಂದಿದ್ದು, ಹಾಗಾಗಿ ಕಬ್ಬಿಗೆ ಸರಿ ಸುಮಾರು 4000 ರೂಪಾಯಿ ದರವನ್ನು ಸರ್ಕಾರ ಘೋಷಣೆ ಮಾಡಬೇಕಾಗಿತ್ತು. ಆದರೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಆಯುಕ್ತರು, ಸರ್ಕಾರ, ಸಚಿವರು ಸಕ್ಕರೆ ಕಾರ್ಖಾನೆ ಜೊತೆ ಹೊಂದಾಣಿಕೆ ಮಾಡಿಕೊಂಡು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಬ್ಬು ಬೆಳೆಗಾರರು ಆರೋಪಿಸಿದ್ದಾರೆ.ಸರ್ಕಾರದ ವಿರುದ್ಧ ರೈತರು ಆಕ್ರೋಶಈ ವರ್ಷದ ಹಂಗಾಮಿಗೆ 12 ರಿಕವರಿ ಇರುವ ಒಂದು ಟನ್ ತೂಕದ ಕಬ್ಬಿಗೆ ಸರ್ಕಾರ 3,200 ರೂಪಾಯಿ ಘೋಷಣೆ ಮಾಡಿದೆ. ಆದರೆ ಕಾರ್ಖಾನೆಯವರು ಕಬ್ಬು ಬೆಳೆಗಾರರಿಗೆ 2,500/2,700 ರೂಪಾಯಿ ಮನಬಂದಂತೆ ದರವನ್ನು ನೀಡುತ್ತಿದ್ದಾರೆ.

ಕಾರ್ಖಾನೆ ಆಡಳಿತ ಮಂಡಳಿ ಆಡಿದ್ದೇ ಆಟವಾಗಿದೆ. ಸರ್ಕಾರ ಸೂಕ್ತ ಬೆಲೆ ಘೋಷಿಸುವ ಮೂಲಕ ಈ ಭಾಗದ ಕಬ್ಬು ಬೆಳೆಗಾರರ ಹಿತಕಾಯಬೇಕಿದೆ ಎಂದು ರೈತರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಅಧಿಕವಾಗಿರುವುದರಿಂದ ಈ ಭಾಗದ ರಸ್ತೆ ಅಭಿವೃದ್ಧಿ ಪಡಿಸುವಂತೆ ಸರ್ಕಾರಕ್ಕೆ ಪ್ರತಿ ವರ್ಷ ಒತ್ತಾಯಿಸಲಾಗುತ್ತದೆ. ಸಕ್ಕರೆ ಕಾರ್ಖಾನೆ ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗೆ ಪ್ರತಿ ವರ್ಷ ಸರ್ಕಾರ ಆಯವ್ಯಯ ಮಂಡನೆ ಮಾಡುತ್ತದೆ. ನೂರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ರೂ ಕೂಡ ಇದುವರೆಗೆ ಅಥಣಿ ಭಾಗದಲ್ಲಿ ಹಾಗೂ ಕಬ್ಬು ಪೂರೈಕೆ ಮಾಡುವ ಹಳ್ಳಿಗಳು ಕಾರ್ಖಾನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಅಭಿವೃದ್ಧಿ ಕಂಡಿಲ್ಲ. ಅಧಿಕಾರಿಗಳು ಆ ಹಣವನ್ನು ಎಲ್ಲಿ ಖರ್ಚು ಮಾಡುತ್ತಿದ್ದಾರೆ ಎಂದು ರೈತರು ಪ್ರಶ್ನಿಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande