ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ವಂಚನೆ
27 ಅಕ್ಟೋಬರ್ (ಹಿ.ಸ): ಆ್ಯಂಕರ್ : ನಿರುದ್ಯೋಗ ಎಂಬುದು ಪೆಡಂಭೂತವಾಗಿ ಯುವ ಸಮೂಹವನ್ನು ಕಾಡುತ್ತಿದೆ. ಸರ್ಕಾರಿ ನೌಕರಿ ಎ
ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ವಂಚನೆ


27 ಅಕ್ಟೋಬರ್ (ಹಿ.ಸ): ಆ್ಯಂಕರ್ :

ನಿರುದ್ಯೋಗ ಎಂಬುದು ಪೆಡಂಭೂತವಾಗಿ ಯುವ ಸಮೂಹವನ್ನು ಕಾಡುತ್ತಿದೆ. ಸರ್ಕಾರಿ ನೌಕರಿ ಎಂಬುದು ಮರೀಚಿಕೆಯಂತಾದ ಸಂದಿಗ್ಧ ಕಾಲಘಟ್ಟವಿದು. ಇದೇ ಸಮಯವನ್ನು ಬಂಡವಾಳ ಮಾಡಿಕೊಂಡ ವಂಚಕರು ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಸುಮಾರು 500 ಜನರಿಗೆ ವಂಚಿಸಿ, 70 ಲಕ್ಷ ರೂಪಾಯಿ ಲಪಟಾಯಿಸಿದ್ದಾರೆ. ವಂಚಕರ ಜಾಡು ಹಿಡಿದ ಹೊಸದುರ್ಗ ಠಾಣೆಯ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ವಂಚಕರ ಬಂಧನ

ವಂಚನೆಯಲ್ಲಿ ಭಾಗಿಯಾಗಿದ್ದ ಬಾಗಲಕೋಟೆಯ ಮಹಮ್ಮದ್ ಸಾಬ್, ವಿಜಯಪುರದ ಬಸವರಾಜ್, ಬಾಗಲಕೋಟೆಯ ವೀರಭದ್ರಪ್ಪ, ವಿಜಯನಗರ ಜಿಲ್ಲೆಯ ಮಂಜುನಾಥ, ಬೆಂಗಳೂರಿನ ಅನಿಲ್ರನ್ನು ಹೊಸದುರ್ಗ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12ಲಕ್ಷ 40ಸಾವಿರ ರೂ. ನಗದು ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande