Custom Heading

ಅ.28ರಂದು ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಜಿಲ್ಲಾ ಪ್ರವಾಸ
ಬಳ್ಳಾರಿ, 27 ಅಕ್ಟೋಬರ್ (ಹಿ.ಸ): ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ
ಅ.28ರಂದು ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಜಿಲ್ಲಾ ಪ್ರವಾಸ


ಬಳ್ಳಾರಿ, 27 ಅಕ್ಟೋಬರ್ (ಹಿ.ಸ):

ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಅ.28ರಂದು ಬೆಳಗ್ಗೆ 10.30ಕ್ಕೆ ಹೆಲಿಪ್ಯಾಡ್ ಮೂಲಕ ಬಳ್ಳಾರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಅ.28ರಂದು ಬೆಳಗ್ಗೆ 10.45ಕ್ಕೆ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ ಮೆಂಟ್ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ನಂತರ 11.15ಕ್ಕೆ ಸರ್ಕಾರಿ ಪಾಲಿಟೆಕ್ನಿಕ್ನ ಸೈಬರ್ ಫಿಸಿಕಲ್ ಸಿಸ್ಟಂ ಅಂಡ್ ಸೆಕ್ಯೂರಿಟಿ ವಿಭಾಗದ ವಿದ್ಯಾರ್ಥಿ ಮೌನೇಶ್ ಅವರನ್ನು ಭೇಟಿಯಾಗಲಿದ್ದಾರೆ.

ನಂತರ ಬೆಳಗ್ಗೆ 11.30ಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಕಾರ್ಯಾಗಾರ ಮತ್ತು New pg curriculm online with NEP-2020 ಹಾಗೂ digital fluency training NASSCOM and Mathworks ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಮಧ್ಯಾಹ್ನ 2ಕ್ಕೆ ವೀರಶೈವ ವಿದ್ಯಾವರ್ಧಕ ಸಂಘಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ಕ್ಕೆ ಅಲ್ಲಿಪುರದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.


 rajesh pande