ಡ್ರಗ್ಸ್ ಪೆಡ್ಲರ್ ಮನೆ ಮೇಲೆ ಸಿಸಿಬಿ ದಾಳಿ! ನೈಜೀರಿಯಾ ಪ್ರಜೆ ಸೆರೆ
27 ಅಕ್ಟೋಬರ್ (ಹಿ.ಸ): ಆ್ಯಂಕರ್ : ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಪೆಡ್ಲರ್ ಮನೆ ಮೇಲೆ ದಾಳಿ ನಡೆಸಿ ನೈಜೀರಿಯಾ ಪ್ರಜೆಯನ
ಡ್ರಗ್ಸ್ ಪೆಡ್ಲರ್ ಮನೆ ಮೇಲೆ ಸಿಸಿಬಿ ದಾಳಿ! ನೈಜೀರಿಯಾ ಪ್ರಜೆ ಸೆರೆ


27 ಅಕ್ಟೋಬರ್ (ಹಿ.ಸ): ಆ್ಯಂಕರ್ :

ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಪೆಡ್ಲರ್ ಮನೆ ಮೇಲೆ ದಾಳಿ ನಡೆಸಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಜೊತೆಗೆ ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್ನ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ರಾಮಮೂರ್ತಿನಗರದ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ. ನೈಜೀರಿಯಾ ಪ್ರಜೆ ಪೋಲ್ಯಾಂಡ್ ಸೇರಿ ವಿವಿಧ ದೇಶಗಳಿಂದ ಡ್ರಗ್ಸ್ ತರಿಸುತ್ತಿದ್ದ. ಪೋಸ್ಟ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಗೋವಾಗೆ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿಗೆ ಸರಬರಾಜು ಆಗುತ್ತಿದ್ದ ಬಗ್ಗೆ ದಾಳಿ ವೇಳೆ ಮಾಹಿತಿ ಲಭ್ಯವಾಗಿದೆ.

ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಎಕ್ಸ್ಟಸಿ ಮಾತ್ರೆ ಸೇರಿ ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ಸ್ನೇಹಿತನ ಮೂಲಕ ಬೆಂಗಳೂರಿಗೆ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ನಂತರ ಐಟಿಬಿಟಿ ಉದ್ಯೋಗಿಗಳು, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಸದ್ಯ ಸಿಸಿಬಿ ಅಧಿಕಾರಿಗಳು ನೈಜೀರಿಯಾ ಪ್ರಜೆ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande