ಕನ್ನಡ ರಾಜ್ಯೋತ್ಸವ ನಿಮಿತ್ತ ವಿಶೇಷ ಕನ್ನಡ ಗೀತೆ ಗಾಯನ : ಡಿಸಿ ಅನಿರುದ್ಧ್ ಶ್ರವಣ್
27 ಅಕ್ಟೋಬರ್ (ಹಿ.ಸ) ಆ್ಯಂಕರ್ : ವಿಜಯನಗರ ಜಿಲ್ಲೆಯಲ್ಲಿ 2021-22ನೇ ಸಾಲಿನ ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಮತ್ತ
ಕನ್ನಡ ರಾಜ್ಯೋತ್ಸವ ನಿಮಿತ್ತ ವಿಶೇಷ ಕನ್ನಡ ಗೀತೆ ಗಾಯನ : ಡಿಸಿ ಅನಿರುದ್ಧ್ ಶ್ರವಣ್


27 ಅಕ್ಟೋಬರ್ (ಹಿ.ಸ)

ಆ್ಯಂಕರ್ : ವಿಜಯನಗರ ಜಿಲ್ಲೆಯಲ್ಲಿ 2021-22ನೇ ಸಾಲಿನ ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಕನ್ನಡಕ್ಕಾಗಿ ನಾವು-ಕನ್ನಡ ರಾಜ್ಯೋತ್ಸವ ಅಭಿಯಾನ ಕಾರ್ಯಕ್ರಮ ನಡೆಯಲಿದೆ.

ಕನ್ನಡ ರಾಜ್ಯೋತ್ಸವ ನಿಮಿತ್ತ ಅ.28ರಂದು ಬೆಳಗ್ಗೆ 11ಕ್ಕೆ ಇಡೀ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ.ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದ್ದಾರೆ.

66ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಾಯನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಡಾ. ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ”, ಡಾ.ಕೆ.ಎಸ್.ನಿಸಾರ್ ಅಹಮದ್ ಅವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ಮೂರು ಗೀತೆಗಳನ್ನು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕಲಾವಿದರಿಂದ ಹಾಡುವ ವ್ಯವಸ್ಥೆ ಮಾಡಲಾಗಿದೆ.

ಈ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ನಡೆಯುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಯುವ ಪ್ರತಿ ಸ್ಥಳಕ್ಕೂ ಒಬ್ಬೊಬ್ಬ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಕಾರ್ಯಕ್ರಮ ನಡೆಯುವ ಸ್ಥಳಗಳು: ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನ, ಹಂಪಿಯ ಮಹಾನವಮಿ ದಿಬ್ಬ ಆವರಣ, ಹೊಸಪೇಟೆಯ ಮುನ್ಸಿಪಲ್ ಮೈದಾನ, ಕನ್ನಡ ವಿಶ್ವವಿದ್ಯಾಲಯ ಆವರಣ, ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯ, ತುಂಗಭದ್ರ ಅಣೆಕಟ್ಟು ಆವರಣ, ಜೋಳದರಾಶಿ ಗುಡ್ಡದ ಮೇಲೆ, ರೈಲ್ವೆ ನಿಲ್ದಾಣ, ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಲ್ಲಿ ಮತ್ತು ಜಿಲ್ಲೆಯ ಎಲ್ಲಾ ಕೈಗಾರಿಕಾ ಕೇಂದ್ರಗಳಲ್ಲಿ ಕನ್ನಡಗೀತ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಆಯಾ ತಾಲೂಕುಗಳಲ್ಲಿ ಆಯಾ ತಾಲೂಕಿನ ತಹಶೀಲ್ದಾರರು, ಮುಖ್ಯಾಧಿಕಾರಿಗಳು ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ಜಂಟಿಯಾಗಿ ರೂಪುರೇಷಗಳನ್ನು ಸಿದ್ದಪಡಿಸಿ ತಮ್ಮ ಹಂತದಲ್ಲಿ ಸದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಅವರು ಆದೇಶಿಸಿದ್ದಾರೆ.


 rajesh pande