Custom Heading

ಬಂಟ್ವಾಳದಲ್ಲಿ ಬಿಜೆಪಿ ಮುಖಂಡನ ಕೊಲೆ ಯತ್ನ: 'ಹಲ್ಲೆ ತಡೆಯಲು ಬಂದವರಿಗೆ ಜೀವ ಬೆದರಿಕೆ'
27 ಅಕ್ಟೋಬರ್ (ಹಿ.ಸ): ಆ್ಯಂಕರ್ : ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರ
ಬಂಟ್ವಾಳದಲ್ಲಿ ಬಿಜೆಪಿ ಮುಖಂಡನ ಕೊಲೆ ಯತ್ನ: 'ಹಲ್ಲೆ ತಡೆಯಲು ಬಂದವರಿಗೆ ಜೀವ ಬೆದರಿಕೆ'


27 ಅಕ್ಟೋಬರ್ (ಹಿ.ಸ): ಆ್ಯಂಕರ್ :

ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಎಂಬವರ ಮೇಲೆ ಕೊಲೆ ಯತ್ನ ಪ್ರಕರಣ ನಡೆದಿದೆ.

ಕಳೆದ ರಾತ್ರಿ ನಿತಿನ್ ಬಡಗಬೆಳ್ಳೂರು ಮತ್ತು ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ಸೇರಿ ಮಚ್ಚು-ಲಾಂಗುಸಹಿತ ಮನೆಗೆ ಪ್ರಕಾಶ್ ಮನೆಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿದ್ದ ಪ್ರಕಾಶ್ ಮೇಲೆ ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ.

ಈ ವೇಳೆ ಹಲ್ಲೆಯನ್ನು ತಡೆಯಲು ಬಂದ ಪ್ರಕಾಶ್ ತಾಯಿ ಮತ್ತು ಅಣ್ಣನಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪ್ರಕಾಶ್ ಕುಟುಂಬಸ್ಥರು ಆರೋಪಿಸಿದ್ದಾರೆ.ವೈಯಕ್ತಿಕ ಕಾರಣಗಳಿಂದ ಘಟನೆ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪ್ರಕಾಶ್ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಸಂದರ್ಭ ಜನ ಸೇರಿದ್ದನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಘಟನೆ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande