ದೇಶದಲ್ಲಿ ನಾವು ವೇಗವಾಗಿ ಒಮಿಕ್ರಾನ್ ಸೋಂಕನ್ನು ಪತ್ತೆ ಹಚ್ಚಿದ್ದೇವೆ; ಆರೋಗ್ಯ ಸಚಿವ ಸುಧಾಕರ್
, 2 ಡಿಸೆಂಬರ್(ಹಿ.ಸ): ಬೆಂಗಳೂರಿನ ಇಬ್ಬರಿಗೆ ಒಮಿಕ್ರಾನ್ ವೈರಸ್ ತಗುಲಿದೆ. ಭಾರತದಲ್ಲಿ ಮೊದಲ ಒಮಿಕ್ರಾನ್ ಕೇಸ್ ಕರ್ನಾ
Dr K Sudhakar Pressmeet after Firs Omicron Virus Detected in Bengaluru


, 2 ಡಿಸೆಂಬರ್(ಹಿ.ಸ):

ಬೆಂಗಳೂರಿನ ಇಬ್ಬರಿಗೆ ಒಮಿಕ್ರಾನ್ ವೈರಸ್ ತಗುಲಿದೆ. ಭಾರತದಲ್ಲಿ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲೇ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಒಮಿಕ್ರಾನ್ ಬಂದಿರುವ ಇಬ್ಬರಿಗೂ 2 ಡೋಸ್ ಕೊರೊನಾ ಲಸಿಕೆ ಆಗಿದೆ. ಮೂರು ದಿನದಿಂದ ಅವರಿಬ್ಬರ ರಿಪೋರ್ಟ್ ಗೆ ಕಾಯುತ್ತಿದ್ದೆವು. ಕೇಂದ್ರ ಸರ್ಕಾರ ಎರಡೂ ಸ್ಯಾಂಪಲ್ ಗಳಲ್ಲಿ ಒಮಿಕ್ರಾನ್ ಪ್ರಬೇಧ ಇದೆ ಎಂದು ದೃಢಪಟ್ಟಿದೆ. ಕರ್ನಾಟಕದಲ್ಲಿ ವಿದೇಶದಿಂದ ಬಂದವರಿಗೆ ಬಹಳ ತುರ್ತಾಗಿ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಒಮಿಕ್ರಾನ್ ಸೋಂಕನ್ನು ನಾವು ಬೇಗ ಕಂಡು ಹಿಡಿದಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ (WHO) ಒಮಿಕ್ರಾನ್ ಬಗ್ಗೆ ಅಧ್ಯಯನ ಮಾಡುತ್ತಿದೆ. ಅಧ್ಯಯನ ಮಾಡಿ ಹೇಳುವವರೆಗೂ ನಾವು ಏನೂ ಹೇಳಲು ಸಾಧ್ಯವಿಲ್ಲ. ಇಡೀ ದೇಶದಲ್ಲಿ ನಾವು ಮೊದಲು ಒಮಿಕ್ರಾನ್ ಸೋಂಕನ್ನು ಕಂಡು ಹಿಡಿದಿದ್ದೇವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರ ಜೊತೆಗೂ ಸಿಎಂ ಮಾತಾಡಿದ್ದಾರೆ. ನಾಳೆ ಸಿಎಂ ಬಂದ ಬಳಿಕ ತುರ್ತು ಸಭೆ ನಡೆಸಲಿದ್ದಾರೆ. ಆರೋಗ್ಯ ಇಲಾಖೆ, ಬಿಬಿಎಂಪಿ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ನಾಳೆಯ ಸಭೆಯ ನಂತರ ವಿಧಾನಸಭಾ ಅಧಿವೇಶನ ನಡೆಸಬೇಕೇ? ಬೇಡವೇ? ಎಂಬುದನ್ನು ಕೂಡ ನಿರ್ಧರಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.ಹಿಂದೂಸ್ತಾನ್ ಸಮಾಚಾರ್


 rajesh pande