೪.೬೧ ಲಕ್ಷ ರೈತರಿಗೆ ಬೆಳೆ ಪರಿಹಾರ ನೀಡಲಾಗಿದೆ - ಕೇಂದ್ರ ಕೃಷಿ ಹಾಗು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭ ಕರಂದ್ಲಾಜೆ
2 ಡಿಸೆಂಬರ್(ಹಿ.ಸ): ಆ್ಯಂಕರ್ : ರಾಜ್ಯ ಸರ್ಕಾರ ಬೆಳೆ ಪರಿಹಾರ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಯನ್ನು ತಂದಿದೆ. ರಾಜ


T_1  H x W: 0 x2 ಡಿಸೆಂಬರ್(ಹಿ.ಸ): ಆ್ಯಂಕರ್ :

ರಾಜ್ಯ ಸರ್ಕಾರ ಬೆಳೆ ಪರಿಹಾರ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಯನ್ನು ತಂದಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು ೪.೬೧ ಲಕ್ಷ ರೈತರಿಗೆ ಬೆಳೆ ಪರಿಹಾರ ನೀಡಲಾಗಿದೆ ಎಂದು ಕೇಂದ್ರ ಕೃಷಿ ಹಾಗು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭ ಕರಂದ್ಲಾಜೆ ಹೇಳಿದ್ದಾರೆ. ಅವರಿಂದು ಚಿಕ್ಕಮಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಒಟ್ಟು ೩೧೮. ೮೭ ಕೋಟಿ ರೂಪಾಯಿಗಳನ್ನು ಸರ್ಕಾರ ಬೆಳೆ ನಷ್ಟ ಅನುಭವಿಸಿದ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದೆ. ಮೂರು ತಿಂಗಳಿಗೊಮ್ಮೆ ಬಿಡುಗಡೆಯಾಗುತ್ತಿದ್ದ ಬೆಳೆ ನಷ್ಟದ ಹಣ ಈಗ ಮೂರು ದಿನಕೊಮ್ಮೆ ಬಿಡುಗಡೆ ಮಾಡಿ ಬೆಳೆ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ಸಿಗುವಂತಹ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಮಾಡಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ರಾಮಗಳ ಅಭಿವೃದ್ಧಿಗೆ ಹಾಗು ಜನ ಕಲ್ಯಾಣ ಕಾರ್ಯಗಳಿಗೆ ಆದ್ಯತೆ ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ವಿದ್ಯುತ್ ಸಂಪರ್ಕ, ಸರ್ವ ಶಿಕ್ಷಣ ಅಭಿಯಾನದಡಿ ಶಾಲೆಗಳ ನಿರ್ಮಾಣ, ಪ್ರತಿ ಮನೆಗೆ ಶೌಚಾಲಯ, ಗ್ರಾಮ ಪಂಚಾಯಿತಿಗಳಿಗೆ ಸ್ವಚ್ಚತೆಗಾಗಿ ಅನುದಾನ ಬಿಡುಗಡೆ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್


 rajesh pande