ಅಮೆರಿಕದ ಒತ್ತಡಕ್ಕೆ ಮಣಿದು ಕಚ್ಚಾ ತೈಲದ ಉತ್ಪಾದನೆ ಹೆಚ್ಚಿಸಲು ಒಪೆಕ್ ರಾಷ್ಟ್ರಗಳ ಒಪ್ಪಿಗೆ
3 ಡಿಸೆಂಬರ್(ಹಿ.ಸ): ಆ್ಯಂಕರ್ : ಕಚ್ಚಾ ತೈಲದ ಉತ್ಪಾದನೆಯನ್ನು ಹೆಚ್ಚಿಸಬೇಕೆಂಬ ಅಮೆರಿಕಾ ಸೇರಿದಂತೆ ಪ್ರಮುಖ ರಾಷ್ಟ್ರಗಳ
ಅಮೆರಿಕದ ಒತ್ತಡಕ್ಕೆ ಮಣಿದು ಕಚ್ಚಾ ತೈಲದ ಉತ್ಪಾದನೆ ಹೆಚ್ಚಿಸಲು ಒಪೆಕ್ ರಾಷ್ಟ್ರಗಳ ಒಪ್ಪಿಗೆ


3 ಡಿಸೆಂಬರ್(ಹಿ.ಸ): ಆ್ಯಂಕರ್ :

ಕಚ್ಚಾ ತೈಲದ ಉತ್ಪಾದನೆಯನ್ನು ಹೆಚ್ಚಿಸಬೇಕೆಂಬ ಅಮೆರಿಕಾ ಸೇರಿದಂತೆ ಪ್ರಮುಖ ರಾಷ್ಟ್ರಗಳ ಒತ್ತಡಕ್ಕೆ ಒಪೆಕ್ ಪ್ಲಸ್ ರಾಷ್ಟ್ರಗಳು ಮಣಿದಿವೆ. ಜನವರಿಯಿಂದ ನಾಲ್ಕು ಲಕ್ಷ ಬ್ಯಾರೆಲ್ ತೈಲ ಉತ್ಪಾದನೆಯನ್ನು ಹೆಚ್ಚಿಸಲು ನಿರ್ಧರಿಸಿವೆ. ಇದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಆದರೆ, ಭಾರತದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಬೆಲೆಗೆ ಅನುಗುಣವಾಗಿ ಇಳಿಕೆ ಮಾಡುತ್ತಾ ಅನ್ನೋದು ಯಕ್ಷಪ್ರಶ್ನೆಯಾಗಿಯೇ ಉಳಿದಿದೆ.

ಕಚ್ಚಾ ತೈಲದ ಬೆಲೆಯ ಬಗ್ಗೆ ಅಮೆರಿಕಾ ಹಾಗೂ ಸೌದಿ ಅರೇಬಿಯಾದ ನಡುವೆ ನಡೆಯುತ್ತಿದ್ದ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ ಬೀಳುವ ಲಕ್ಷಣ ಗೋಚರಿಸಿದೆ. ಒಮಿಕ್ರಾನ್ ಪ್ರಭೇದದ ಹೊಸ ಕೊರೊನಾ ವೈರಸ್ ಪತ್ತೆಯಾಗಿರುವುದರಿಂದ ಕಚ್ಚಾ ತೈಲ ಉತ್ಪಾದಿಸುವ ರಾಷ್ಟ್ರಗಳ ಒಕ್ಕೂಟವಾದ ಒಪೆಕ್ ಈಗ ಕಚ್ಚಾ ತೈಲದ ಉತ್ಪಾದನೆ ಹೆಚ್ಚಿಸಲು ನಿರ್ಧರಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande