Custom Heading

ಜೋಕುಮಾರ ಹುಟ್ಟಲಿ, ಲೋಕವೆಲ್ಲ ಬೆಳಗಲಿ
ರಾಯಚೂರು, 15 ಸೆಪ್ಟೆಂಬರ್ (ಹಿ.ಸ): ನಮ್ಮ ನಾಡು ಸಂಪ್ರದಾಯ ಸಂಸ್ಕೃತಿಯ ನೆಲೆಬೀಡು, ಗ್ರಾಮೀಣ ಪ್ರದೇಶದಲ್ಲಿ ಹಿಂದಿನಿಂದ
ಜೋಕುಮಾರ ಹುಟ್ಟಲಿ, ಲೋಕವೆಲ್ಲ ಬೆಳಗಲಿ


ಜೋಕುಮಾರ ಹುಟ್ಟಲಿ, ಲೋಕವೆಲ್ಲ ಬೆಳಗಲಿ


ಜೋಕುಮಾರ ಹುಟ್ಟಲಿ, ಲೋಕವೆಲ್ಲ ಬೆಳಗಲಿ


ರಾಯಚೂರು, 15 ಸೆಪ್ಟೆಂಬರ್ (ಹಿ.ಸ):

ನಮ್ಮ ನಾಡು ಸಂಪ್ರದಾಯ ಸಂಸ್ಕೃತಿಯ ನೆಲೆಬೀಡು, ಗ್ರಾಮೀಣ ಪ್ರದೇಶದಲ್ಲಿ ಹಿಂದಿನಿಂದ ಆಚರಿಸುತ್ತಾ ಬಂದ ಕೆಲ ಧಾರ್ಮಿಕ ಆಚರಣೆಗಳು ಇಂದಿಗೂ ನಮ್ಮಲ್ಲಿ ಪ್ರಸ್ತುತ ಎನ್ನುವುದಕ್ಕೆ ಜಿಲ್ಲೆಯಲ್ಲಿ ಜೋಕುಮಾರನ ಹಬ್ಬ ಕೂಡಾ ಒಂದು.

ಹಿಂದಿನಿಂದ ತಮ್ಮ ಹಿರಿಯರು ಆಚರಿಸುತ್ತಾ ಬಂದ ಈ ಜೋಕುಮಾರನ ಹಬ್ಬ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಚಾಲ್ತಿಯಲ್ಲಿದೆ.

ಜೋಕುಮಾರ ಹುಟ್ಟಲಿ, ಲೋಕವೆಲ್ಲ ಬೆಳಗಲಿ, ಆ ತಾಯಿ ಹಾಲು ಕರೆಯಲಿ, ಕಟ್ಟಿದ ಮೊಸರು ಕಟಿಯಲಿ ನಮ್ಮ ದೇವಿ…ಎಂದು ಹೀಗೆ ಸಾಮೂಹಿಕವಾಗಿ ಮಹಿಳೆಯರು ಜೋಕುಮಾರನ ಕುರಿತು ಜನಪದ ಶೈಲಿಯಲ್ಲಿ ಸುಶ್ರಾವ್ಯವಾಗಿ ಹಾಡುವ ಹಾಡುಗಳನ್ನು ಕೇಳುವುದೇ ಚಂದ.

ಅಡ್ಡಡ್ಡ ಮಳಿ ಬಂದ, ದೊಡ್ಡ ದೊಡ್ಡ ಕೆರಿ ತುಂಬಿ, ಗೊಡ್ಡುಗಳೆಲ್ಲಾ ಹೈನಾಗಿ ಜೋಕುಮಾರ. ಮಡಿವಾಳರ ಕೇರಿ ಹೊಕ್ಯಾನೆ ಜೋಕುಮಾರ, ಮುಡಿ ತುಂಬಾ ಹೂ ಮುಡಿದಂತೆ ಚಲುವಿ ತನ್ನ ಮಡದಿಯಾಗೆಂದ ಸುಕುಮಾರ.

ಈ ರೀತಿ ಜನಪದ ಶೈಲಿಯಲ್ಲಿ ವಿಶಿಷ್ಟವಾಗಿ ಹಾಡುಗಳನ್ನು ಹಾಡುವ ಗಂಗಾಮತ (ಕಬ್ಬೇರ) ಸಮುದಾಯದ ಮಹಿಳೆಯರು ಬಿದಿರಿನ ಬುಟ್ಟಿಯಲ್ಲಿ ಜೋಕುಮಾರನನ್ನು ಬೇವಿನ ಎಲೆಗಳ ಮಧ್ಯೆ ಪ್ರತಿಷ್ಠಾಪಿಸಿಕೊಂಡು ಆತನ ಬಾಯಿಯಲ್ಲಿ ಬೆಣ್ಣೆಯನ್ನು ಇಟ್ಟು ಮನೆಗಳಿಗೆ ಹೊತ್ತೂಯ್ಯುವ ಜೋಗಪ್ಪನ ಹಬ್ಬದ ಆಚರಣೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸದ್ಯ ಕಂಡು ಬರುತ್ತಿರುವ ದೃಶ್ಯ.

ವಿಘ್ಞ ನಿವಾರಕ ಗಣೇಶ್ ವಿರ್ಸಜನೆಯ ನಂತರ ಜನಿಸಿರುವ ಜೋಕುಮಾರ ಸ್ವಾಮಿಯನ್ನು ಹನ್ನೊಂದು ದಿನಗಳ ಕಾಲ ವಿವಿಧ ಗ್ರಾಮಗಳಲ್ಲಿ ಗಂಗಾಮತ (ಕಬ್ಬೇರ) ಸಮುದಾಯದವರು ಜೋಕುಮಾರಸ್ವಾಮಿಯನ್ನು ಮೆರೆಸುತ್ತಾರೆ.

ಎಣ್ಣೆ ಮತ್ತು ಹುತ್ತಿನ ಮಣ್ಣಿನಿಂದ ತಯಾರಿಸಿದ ಜೋಕುಮಾರನನ್ನು ಹೊಸ ಬಿದಿರಿನ ಬುಟ್ಟಿಯಲ್ಲಿ ಪ್ರತಿಷ್ಠಾಪಿಸಿ ಬೇವಿನ ಎಲೆ, ಸಜ್ಜೆ, ಜೋಳ, ದಾಸವಾಳ ಹೂವಿನಿಂದ ಪೂಜೆ ಮಾಡಿ ಅಲಂಕರಿಸಲಾಗಿರುತ್ತದೆ. ಹೀಗೆ ಬುಟ್ಟಿಯಲ್ಲಿ ಹೊತ್ತೂಯ್ಯುವ ಜೋಕುಮಾರನಿಗೆ ಮನೆ ಮಂದಿ ಅಡಿಕೆ, ಎಲೆ, ಅಕ್ಕಿ, ಜೋಳ ಇತ್ಯಾದಿ ಕಾಳುಕಡಿ, ಎಣ್ಣೆ ಉಪ್ಪು, ಹುಣಸೆ, ಒಣ ಮೆಣಸಿನಕಾಯಿ, ಬೆಲ್ಲ ಮುಂತಾದ ಪದಾರ್ಥಗಳನ್ನು ಕೊಡುವರು.

ಜೋಕುಮಾರಸ್ವಾಮಿಯ ಕಥೆ:

ಗಣೇಶ ಹಬ್ಬದ ಮರುದಿನ ಆರಂಭವಾಗುವ ಜೋಕುಮಾರಸ್ವಾಮಿ ಆಚರಣೆ ಹಿಂದೆಯೂ ಒಂದು ಜಾನಪದ ಕಥೆಯಿದೆ. ಈ ಕುರಿತಂತೆ ಈ ಭಾಗದ ಮಹಿಳೆಯರು ಹೇಳುವುದು ಹೀಗೆ.

ಜೋಕ ಮತ್ತು ಎಳೆಗೌರಿ ದಂಪತಿಗೆ ಬಹುಕಾಲ ಮಕ್ಕಳಾಗದ ಕಾರಣ ಶಿವನನ್ನು ಪ್ರಾರ್ಥಿಸುತ್ತಾರೆ. ಆಗ ಶಿವನು ಒಬ್ಬ ಮಗನನ್ನು ಕರುಣಿಸುತ್ತಾನೆ. ಆದರೆ ಆ ಮಗುವಿಗೆ ಶೀಘ್ರ ಬೆಳವಣಿಗೆ ಹಾಗೂ ಏಳೆ ದಿನಗಳ ಆಯಸ್ಸು ಇರುತ್ತದೆ. ಹೀಗಿರಬೇಕಾದರೆ, ಒಮ್ಮೆ ನಾಡಿನಲ್ಲಿ ಮಳೆ ಹೋಗಿ ಬೆಳೆಗಳೆಲ್ಲಾ ಒಣಗಿ ಜನರ ಸಂಕಟ ಮುಗಿಲು ಮುಟ್ಟುತ್ತದೆ.

ಆಗ ಜೋಕುಮಾರ ತನ್ನ ಕುದುರೆಯನ್ನೇರಿ ಹೊಲಗದ್ದೆಗಳಲ್ಲಿ ಸಂಚರಿಸಲು ತೊಡಗುತ್ತಾನೆ. ಅವನು ತನ್ನ ಮೇಲು ಹೊದಿಕೆಯನ್ನು ಒಮ್ಮೆ ಜೋರಾಗಿ ಬೀಸಿದಾಗ ಅದರ ಸೆಳಕಿಗೆ ಚದುರಿದ ಮೋಡಗಳು ಮಳೆ ಸುರಿಸುತ್ತವೆ. ಯಥೇಚ್ಛವಾಗಿ ಬಿದ್ದ ಮಳೆಯಿಂದಾಗಿ ಬೆಳೆಗಳು ಸಮೃದ್ಧವಾಗಿ ಬೆಳೆಯುತ್ತವೆ. ಬತ್ತಿ ಬರಿದಾಗಿದ್ದ ಕೆರೆ ಕುಂಟೆಗಳು ತುಂಬಿತುಳುಕುತ್ತವೆ.

ಇದರಿಂದ ಸಂತಸಗೊಂಡು ಜೋಕುಮಾರನು ಹಾಗೆ ಹೊಲ ಗದ್ದೆಗಳಲ್ಲಿ ಸಂಚರಿಸುತ್ತಿರುವಾಗ ಸುಂದರಿಯಾದ ಅಗಸರ ಸಮುದಾಯದ ಯುವತಿಯನ್ನು ನೋಡಿ ಇಷ್ಟಪಡುತ್ತಾನೆ. ಇದನ್ನು ಸಹಿಸದ ಆ ಯುವತಿಯ ತಂದೆ ಜೋಕುಮಾರನ ತಲೆಯನ್ನು ಕತ್ತರಿಸಿ ನದಿಗೆ ಎಸೆಯುತ್ತಾನೆ. ಆ ತಲೆಯು ಒಬ್ಬ ಬೆಸ್ತರ (ಗಂಗಾಮತ, ಕಬ್ಬೇರ)ನಿಗೆ ದೊರಕುತ್ತದೆ. ಆತನು ಇದು ಜೋಕುಮಾರನ ತಲೆ ಎಂದು ಗುರುತಿಸುತ್ತಾನೆ.

ತಮ್ಮ ಬೆಳೆಗಳನ್ನು ರಕ್ಷಿಸಿ ತಮ್ಮ ಬದುಕಿಗೆ ಆಧಾರವಾದ ಜೋಕುಮಾರನ ತಲೆಯನ್ನು ಊರಿಗೆ ತರುತ್ತಿದ್ದಂತೆ ಊರವರೆಲ್ಲಾ ಸೇರಿ ಪೂಜೆ ಸಲ್ಲಿಸುತ್ತಾರೆ. ಅಂದಿನಿಂದ ಜೋಕುಮಾರನ ಪೂಜೆ ಆಚರಣೆಗೆ ಬಂದಿದೆ ಎಂದು ಮಹಿಳೆಯರು ಜೋಕುಮಾರನ ಕಥೆಯನ್ನು ವಿವರಿಸುತ್ತಾರೆ.

ಬಿದಿರಿನ ಬುಟ್ಟಿಯಲ್ಲಿ ಬೇವಿನ ಎಲೆಗಳ ಮಧ್ಯೆ ಪ್ರತಿಷ್ಠಾಪಿಸಿಕೊಂಡು ಆತನ ಬಾಯಿಯಲ್ಲಿ ಬೆಣ್ಣೆಯನ್ನು ಇಟ್ಟು ಸುತ್ತಮೂತ್ತಲಿನ ಗ್ರಾಮಗಳ ಮನೆ-ಮನೆಗಳಿಗೆ ಹೊತ್ತೂಯ್ಯುದು ಜೋಕುಮಾರ ಹಬ್ಬದ ಆಚರಣೆಯನ್ನು ಪ್ರತಿ ವರ್ಷ ಮಾಡಲಾಗುತ್ತಿದೆ. -ಭೀಮವ್ವ, ಜೋಕುಮಾರನ ಪೂಜೆ ಮಾಡುವ ಮಹಿಳೆ.


 rajesh pande