ಟಿ-20 ವಿಶ್ವಕಪ್ ಬಳಿಕ ಕೋಚ್ ಹುದ್ದೆಗೆ ರವಿಶಾಸ್ತ್ರಿ ರಾಜೀನಾಮೆ
ಹೈದರಾಬಾದ್, 15 ಸೆಪ್ಟೆಂಬರ್ (ಹಿ.ಸ): ಐಸಿಸಿ ಟಿ-20 ವಿಶ್ವಕಪ್ ಮುಕ್ತಾಯದ ಬಳಿಕ ಭಾರತೀಯ ಕ್ರಿಕೆಟ್ ತಂಡದ ಕೋಚ್ ರವಿಶಾಸ

ಹೈದರಾಬಾದ್, 15 ಸೆಪ್ಟೆಂಬರ್ (ಹಿ.ಸ): ಐಸಿಸಿ ಟಿ-20 ವಿಶ್ವಕಪ್ ಮುಕ್ತಾಯದ ಬಳಿಕ ಭಾರತೀಯ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡವುದು ಖಚಿತವಾಗಿದೆ.

ಸ್ವತಃ ರವಿಶಾಸ್ತ್ರಿಯವರೇ ಖುದ್ದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಈ ಕುರಿತು ಮಾಹಿತಿ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

2017ರಿಂದ 2019ರವರೆಗೆ ಟೀಂ ಇಂಡಿಯಾ ಕೋಚ್ ಆಗಿ ಸೇವೆ ಸಲ್ಲಿಸಿದ್ದ ರವಿಶಾಸ್ತ್ರಿ ಅವರನ್ನು ಐಸಿಸಿ ಟಿ-20 ವಿಶ್ವಕಪ್ ಮುಕ್ತಾಯದವರೆಗೆ ಕೋಚ್ ಆಗಿ ಮುಂದುವರೆಸಲಾಗಿತ್ತು.

ಇದೀಗ ಈ ಅವಧಿ ಮುಕ್ತಾಯವಾಗುತ್ತಿದ್ದಂತೆ ಕೋಚ್ ಹುದ್ದೆ ತೊರೆಯಲಿದ್ದಾರೆ ಎಂದು ಹೇಳಲಾಗಿದೆ.

ಅಕ್ಟೋಬರ್ 17ರಿಂದ ನವೆಂಬರ್ 14ರವರೆಗೆ ವಿಶ್ವಕಪ್ ಟಿ-20 ಟೂರ್ನಿ ನಡೆಯಲಿದ್ದು, ಇದಾದ ಬಳಿಕ ಭಾರತ ತಂಡಕ್ಕೆ ನೂತನ ಕೋಚ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಬೌಲಿಂಗ್ ಕೋಚ್ ಭರತ್ ಅರುಣ್ ಹಾಗೂ ಫೀಲ್ಡಿಂಗ್ ಕೋಚ್ ಆಗಿರುವ ಶ್ರೀಧರ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಮಾತ್ರ ತಂಡದ ಜತೆ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೂತನ ತರಬೇತುದಾರರ ಹುದ್ದೆ ರೇಸ್ ನಲ್ಲಿ ರಾಹುಲ್ ದ್ರಾವಿಡ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿದೆ. ಶ್ರೀಲಂಕಾ ಪ್ರವಾಸ ಕೈಗೊಂಡು ಅನುಭವ ಹೊಂದಿರುವ ದ್ರಾವಿಡ್ ಅವರನ್ನು ರವಿಶಾಸ್ತ್ರೀ ಉತ್ತರಾಧಿಕಾರಿಯಾಗಿ ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಹಿಂದೂಸ್ತಾನ್ ಸಮಾಚಾರ್


 rajesh pande