ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ
ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ): ಬ್ಯಾಡರಹಳ್ಳಿಯ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾ
ಬ್ಯಾಡರಹಳ್ಳಿಯ‌ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದು ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತಯಾಗಿವೆ. 


ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ): ಬ್ಯಾಡರಹಳ್ಳಿಯ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದು ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತಯಾಗಿವೆ.

ಸ್ಥಳೀಯ ಪತ್ರಿಕೆಯೊಂದರ ಸಂಪಾದಕರ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರನ್ನು ಭಾರತಿ (50), ಸಿಂಚನ(33), ಸಿಂಧುರಾಣಿ (30),ಹಾಗೂ ಸಾಗರ(27) ಎಂದು ಗುರುತಿಸಲಾಗಿದೆ. ಜತೆಗೆ ಒಂಭತ್ತು ತಿಂಗಳು ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಐದು ದಿನದ ಹಿಂದೆಯೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಕಳೆದ ಐದು ದಿನಗಳಿಂದ 3 ವರ್ಷದ ಒಂದು ಮಗು ಮಾತ್ರ ಬದುಕಿತ್ತು. ಆಹಾರವಿಲ್ಲದೆ ನಿತ್ರಾಣವಾಗಿತ್ತು. ಸದ್ಯ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೌಟುಂಬಿಕ ಕಲಹದಿಂದ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು ಎನ್ನಲಾಗಿದೆ. ಶಂಕರ್ ಪತ್ನಿ ಜತೆ ಓರ್ವ ಮಗ, ಇಬ್ಬರು ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಡಿಸಿಪಿ ಡಾ.ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande