ದೇಶದಲ್ಲಿ 2 ಕೋಟಿ ಮಂದಿಗೆ ಲಸಿಕೆ : ಹೊಸ ದಾಖಲೆ
ನವದೆಹಲಿ, 17 ಸೆಪ್ಟೆಂಬರ್ (ಹಿ.ಸ): ಕೊರೊನಾ ಸೋಂಕಿನ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ಹೊಸ ದಾಖಲೆ ಬರೆದಿದೆ. ಒಂದೇ ದಿನ
ದೇಶದಲ್ಲಿ 2 ಕೋಟಿ ಮಂದಿಗೆ ಲಸಿಕೆ : ಹೊಸ ದಾಖಲೆ.


ನವದೆಹಲಿ, 17 ಸೆಪ್ಟೆಂಬರ್ (ಹಿ.ಸ): ಕೊರೊನಾ ಸೋಂಕಿನ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ಹೊಸ ದಾಖಲೆ ಬರೆದಿದೆ.

ಒಂದೇ ದಿನ 2 ಕೋಟಿಗೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದ್ದು ಇಂದು ಹೊಸ ಮೈಲಿಗಲ್ಲು. ಅಲ್ಲದೆ ವಿಶ್ವದಲ್ಲಿಯೇ ಅತ್ಯಧಿಕ ಮಂದಿಗೆ ಒಂದೇ ದಿನ ಲಸಿಕೆ ನೀಡಿದ ದೇಶಗಳ ಪೈಕಿ ಭಾರತ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಅಂಗವಾಗಿ ದೇಶಾದ್ಯಂತ ಲಸಿಕೆ ನೀಡಿಕೆ ಪ್ರಮಾಣವನ್ನು ಹೆಚ್ಚು ಮಾಡಿದ್ದು ಇದುವರೆಗೂ 2 ಕೋಟಿಗೂ ಅಧಿಕ ಲಸಿಕೆ ನೀಡಲಾಗಿದೆ ಪ್ರಮಾಣ ಸಂಜೆಯವರೆಗೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಸರಾಸರಿ ಪ್ರತಿ ನಿಮಿಷಕ್ಕೆ 42000 ಮಂದಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆಯಿಂದ ಮಧ್ಯಾಹ್ನ 1.30 ರ ವೇಳೆಗೆ ದೇಶದಲ್ಲಿ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿತ್ತು ಸಂಜೆ 5 ಗಂಟೆಯ ವೇಳೆಗೆ ಮತ್ತೆ ಒಂದು ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ ಇದುವರೆಗೂ ಒಟ್ಟಾರೆಯಾಗಿ ಎರಡು ಕೋಟಿಗೂ ಹೆಚ್ಚು ಜನರಿಗೆ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಹುಟ್ಟುಹಬ್ಬಕ್ಕೆ ಉಡುಗೊರೆ:

ದೇಶದಲ್ಲಿ ಒಂದೇ ದಿನ ಎರಡು ಕೋಟಿಗೂ ಅಧಿಕ ಮಂದಿಗೆ ಕೋರೊನಾ ಸೋಂಕಿನ ಲಸಿಕೆ ಹಾಕುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ಕೊಡುಗೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ತಿಳಿಸಿದ್ದಾರೆ.

2 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಿಕೆಯಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಮಂಚೂಣಿ ಕಾರ್ಯಕರ್ತರ ಶ್ರಮ ಶ್ಲಾಘನೀಯ ಎಂದು ತಿಳಿಸಿದ್ದಾರೆ.

ಡಿಸೆಂಬರ್ ಅಂತ್ಯದ ವೇಳೆಗೆ ಇಲ್ಲವೆ ಮುಂದಿನ ವರ್ಷದ ಆರಂಭದ ವೇಳೆಗೆ ದೇಶದ ಎಲ್ಲ ಜನರಿಗೆ ಸಂಪೂರ್ಣ ಲಸಿಕೆ ನೀಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ

ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯಸ್ಥ ಆರ್ ಎಸ್ ಶರ್ಮಾ ಮಾತನಾಡಿ, ದೇಶದಲ್ಲಿ ಪ್ರತಿ ಸೆಕೆಂಡಿಗೆ 700 ಮಂದಿ ಹಾಗೂ ಒಂದು ನಿಮಿಷಕ್ಕೆ 42000 ಅಧಿಕ ಜನರಿಗೆ ಲಸಿಕೆ ನೀಡಲಾಗುತ್ತಿದೆ ವಿಶ್ವದ ಯಾವುದೇ ದೇಶದಲ್ಲಿ ಎಷ್ಟು ಲಸಿಕೆಯನ್ನು ನೀಡಿದ ಉದಾಹರಣೆಗಳಿಲ್ಲ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande