Custom Heading

ದಾವಣಗೆರೆಯಲ್ಲಿ ಇಂದಿನಿಂದ 2 ದಿನಗಳ ಕಾಲ ರಾಜ್ಯ ಬಿಜೆಪಿ ಕಾರ್ಯಕಾರಿಣಿ.
ದಾವಣಗೆರೆ, 18 ಸೆಪ್ಟೆಂಬರ್ (ಹಿ.ಸ):ದಾವಣಗೆರೆಯಲ್ಲಿ ಇಂದಿನಿಂದ 2 ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲ
 ರಾಜ್ಯ ಬಿಜೆಪಿ ಕಾರ್ಯಕಾರಿಣಿ.


ದಾವಣಗೆರೆ, 18 ಸೆಪ್ಟೆಂಬರ್ (ಹಿ.ಸ):ದಾವಣಗೆರೆಯಲ್ಲಿ ಇಂದಿನಿಂದ 2 ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿ ಇದಾಗಿದೆ.

ಇಂದು ಸಂಜೆ ಪದಾಧಿಕಾರಿಗಳ ಸಭೆ ನಡೆಯಲಿದ್ದು, ನಾಳೆ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಕಾರ್ಯಕಾರಿಣಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.

*

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಾ. ಜಿ.ಎಂ.ಸಿದ್ದೇಶ್ವರ್, ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಹಾಗೂ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯನ್ನು ಯಶಸ್ವಿಗೊಳಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

2 ದಿನಗಳ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕಾರ್ಯಕಾರಿಣಿಯಲ್ಲಿ ಪಕ್ಷ ಸಂಘಟನೆ, ಮುಂಬರುವ ಚುನಾವಣೆಗಳಿಗೆ ಅಗತ್ಯ ಕಾರ್ಯತಂತ್ರ, ಕೇಂದ್ರ-ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರಿಗೆ ತಲುಪಿಸಲು ಕೈಗೊಳ್ಳಬೇಕಾದ ಕ್ರಮಗಳು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande