ಸ್ಯಾಂಡಲ್ ವುಡ್ ನಟ ದಿ. ಡಾ.ವಿಷ್ಣುವರ್ಧನ್ ಅವರ 71ನೇ ಜನ್ಮ ದಿನ ಆಚರಣೆ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ):ಕನ್ನಡ ಚಿತ್ರರಂಗದಲ್ಲಿ ರಾರಾಜಿಸಿದ ನಟ ದಿವಂಗತ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ
ಡಾ.ವಿಷ್ಣುವರ್ಧನ್ ಅವರ 71ನೇ ಜನ್ಮ ದಿನ


ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ):ಕನ್ನಡ ಚಿತ್ರರಂಗದಲ್ಲಿ ರಾರಾಜಿಸಿದ ನಟ ದಿವಂಗತ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 71ನೇ ಜನ್ಮದಿನ. ಜನ್ಮದಿನದ ಪ್ರಯುಕ್ತ ನಟ ಅನಿರುದ್ಧ ಅಭಿಮಾನಿಗಳಿಗೆ ಹುಟ್ಟುಹಬ್ಬ ಆಚರಿಸಲು ಆಹ್ವಾನ ನೀಡಿದ್ದಾರೆ.

ಕೋಟ್ಯಂತರ ಅಭಿಮಾನಿಗಳ ಹೃದಯವಂತನಾಗಿ ಪ್ರೇಕ್ಷಕರ ಮನದಲ್ಲಿ ಉಳಿದಿರುವ ಡಾ. ವಿಷ್ಣುವರ್ಧನ್, ಬದುಕಿದ್ದರೆ ಇಂದು 71ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಸೆಪ್ಟೆಂಬರ್ 18 ಬಂತು ಬಂದರೆ ಸಾಕು ಸಾಹಸ ಸಿಂಹನ ಹುಟ್ಟುಹಬ್ಬವನ್ನ ಅಭಿಮಾನಿಗಳು ಅನ್ನದಾನ, ರಕ್ತದಾನದ ಮೂಲಕ ವಿಭಿನ್ನವಾಗಿ ಆಚರಿಸುತ್ತಾರೆ.

ಕಳೆದ ವರ್ಷ ವಿಷ್ಣುವರ್ಧನ್ ಸ್ಮಾರಕದ ಸಮಸ್ಯೆ ಬಗೆಹರಿದಿದೆ. ಮೈಸೂರಿನ ಹೆಚ್.ಡಿ ಕೋಟೆ ಸಮೀಪದ ಐದು ಎಕರೆ ಜಮೀನು ನೀಡಿ, ಸ್ಮಾರಕ ನಿರ್ಮಾಣಕ್ಕೆ ಚಾಲನೆ ಕೂಡ ನೀಡಲಾಗಿದೆ. ಕಳೆದ ವರ್ಷ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ, ವಿಷ್ಣುವರ್ಧನ್ ಮಗಳು ಕೀರ್ತಿ ಸೇರಿದಂತೆ ಕುಟುಂಬ ವರ್ಗ ಹಾಗೂ ಅಭಿಮಾನಿಗಳು ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಹುಟ್ಟುಹಬ್ಬ ಆಚರಿಸಿದ್ದರು. ಅದೇ ರೀತಿ ಈ ವರ್ಷವೂ ಕೂಡ ವಿಷ್ಣುವರ್ಧನ್ ಕುಟುಂಬಸ್ಥರು ಮೈಸೂರಿನಲ್ಲಿರುವ ಸ್ಮಾರಕದ ಬಳಿ ಜನ್ಮದಿನ ಆಚರಿಸಲಿದ್ದಾರೆ.

ವಿಷ್ಣುವರ್ಧನ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅಭಿಮಾನಿಗಳಿಗೆ ಮತ್ತು ಮಾಧ್ಯಮ ಸ್ನೇಹಿತರಿಗೆ ವಿಡಿಯೋ ಮೂಲಕ ಆಹ್ವಾನ ನೀಡಿದ್ದಾರೆ. ಜೊತೆಗೆ ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಆಗಮಿಸುವಂತೆ ಮನವಿ ಮಾಡಿದ್ದಾರೆ.

ಒಡಿಶಾದ ಪುರಿ ಸಮುದ್ರ ತೀರದಲ್ಲಿ ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರ ಮರಳು ಕಲಾಕೃತಿ ಬಿಡಿಸಿದ್ದಾರೆ. ಇದು 6 ಅಡಿ ಎತ್ತರ ಮತ್ತು 15 ಅಡಿ ಅಗಲವಿದ್ದು, ಮರಳಿನಲ್ಲಿ ಅರಳಿದ ಈ ಶಿಲ್ಪಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್.ಎಂ.ಎಸ್.ಯ.ಮ


 rajesh pande