Custom Heading

ಪ್ರಧಾನಿ ಮೋದಿ ಜನ್ಮದಿನದಂದು 2.50 ಕೋಟಿಗೂ ಅಧಿಕ ಜನರಿಗೆ ಲಸಿಕೆ ವಿತರಣೆ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ): ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಹೊಸ ಮೈಲುಗಲ್ಲು ಸಾಧಿಸಿದೆ. ಪ್ರಧಾನಿ ನರೇಂದ್
2.50 ಕೋಟಿಗೂ ಅಧಿಕ ಜನರಿಗೆ ಲಸಿಕೆ ವಿತರಣೆ


ನವದೆಹಲಿ, 18 ಸೆಪ್ಟೆಂಬರ್ (ಹಿ.ಸ): ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಹೊಸ ಮೈಲುಗಲ್ಲು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ದೇಶಾದ್ಯಂತ ದಾಖಲೆಯ ಎರಡೂವರೆ ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆಯಾಗಿದೆ. ಕೋ-ವಿನ್ ಪೋರ್ಟಲ್ನ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯರಾತ್ರಿ 12ರವರೆಗೆ ದೇಶದಲ್ಲಿ 2,50,10,112 ಲಸಿಕೆ ವಿತರಣೆ ಮಾಡಲಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಸಂಖ್ಯೆ 79.33 ಕೋಟಿ ಡೋಸ್ ತಲುಪಿದೆ.

ಭಾರತೀಯ ಜನತಾ ಪಕ್ಷ(ಬಿಜೆಪಿ) ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದು ದೇಶದಲ್ಲಿ ಗರಿಷ್ಠ ಸಂಖ್ಯೆಯ ಕೋವಿಡ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆ ಸ್ಥಾಪಿಸುವುದಾಗಿ ಹೇಳಿತ್ತು.

ಹಿಂದೂಸ್ತಾನ್ ಸಮಾಚಾರ್.ಎಂ.ಎಸ್.ಯ.ಮ


 rajesh pande