ಉಪೇಂದ್ರ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ, ಕಬ್ಜ ಚಿತ್ರತಂಡದಿಂದ ವಿಶೇಷ ಟೀಸರ್
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ): ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಇಂದು ಹುಟ್ಟುಹಬ್ಬದ ಸಂಬ್ರಮ.
ಉಪೇಂದ್ರ ಅವರಿಗೆ ಇಂದು ಹುಟ್ಟು ಹಬ್ಬ


ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ): ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಇಂದು ಹುಟ್ಟುಹಬ್ಬದ ಸಂಬ್ರಮ. ಉಪ್ಪಿ ಅಭಿಮಾನಿಗಳಿಗಾಗಿ ಸಖತ್ ಉಡುಗೊರೆ ಸಿಗಲಿದೆ. ಒಂದು ಕಡೆ ಉಪ್ಪಿ ನಿರ್ದೇಶನದ ಸಿನಿಮಾದ ಅಪ್ಡೇಟ್ ಆದರೆ, ಮತ್ತೊಂದು ಕಡೆ ಬಹುನಿರೀಕ್ಷಿತ ಸಿನಿಮಾ ಕಬ್ಜ ಚಿತ್ರತಂಡ ವಿಶೇಷ ಟೀಸರ್ ಬಿಡುಗಡೆಗೆ ಮುಂದಾಗಿದೆ.

ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ತಯಾರಿ ನಡೆಸಿಕೊಂಡಿದ್ದರು. ಹೀಗಿರುವಾಗಲೇ ಉಪೇಂದ್ರ ಈ ಸಲ ಅಭಿಮಾನಿಗಳ ಜೊತೆ ಹುಟ್ಟುಹಬ್ಬದ ಆಚರಣೆ ಮಾಡಲು ಸಾಧ್ಯವಾಗುತ್ತಿಲ್ಲ. ನೀವು ಇರುವಲ್ಲಿಯೇ ಸರಳವಾಗಿ ಹುಟ್ಟುಹಬ್ಬ ಆಚರಿಸಿ, ಎಂದು ಉಪೇಂದ್ರ ವಿಶ್ ಮಾಡಿ ಎಂದು ಮನವಿ ಮಾಡಿದ್ದಾರೆ.

ಈ ಮಾತು ಕೇಳಿ ಅಭಿಮಾನಿಗಳಿಗೆ ಬೇಸರ ಆಗಿದೆಯಾದರೂ, ಉಪೇಂದ್ರ ಅವರು ಅಭಿಮಾನಿಗಳಿಗೆಂದು ಸಖತ್ ಸರ್ಪ್ರೈಸ್ ಪ್ಲಾನ್ ಮಾಡಿದ್ದಾರೆ.

ಮೊದಲಿಗೆ ಆರ್. ಚಂದ್ರು ನಿರ್ದೇಶನದ ಸಿನಿಮಾ ಕಬ್ಜ ಚಿತ್ರತಂಡದ ಕಡೆಯಿಂದ ವಿಶೇಷವಾಗಿ ರಿಯಲ್ ಸ್ಟಾರ್ ಟೀಸರ್ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಉಪೇಂದ್ರ ಡಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಕಬ್ಜ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಸುದೀಪ್ ಅವರು ನಟಿಸಿದ್ದಾರೆ.

ಉಪೇಂದ್ರ ಅವರು ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಹೊಸ ಸಿನಿಮಾ ನಿರ್ದೇಶನ ಮಾಡಲು ಸಜ್ಜಾಗಿದ್ದು, ಆ ಚಿತ್ರದ ಪೋಸ್ಟರ್ ಅನ್ನು ಅವರು ಹಂಚಿಕೊಂಡಿದ್ದು, ಟೈಟಲ್ ಏನಿರಬಹುದು ಎಂದು ಊಹಿಸಿ ಅಂತ ಕೆಲಸ ಕೊಟ್ಟಿದ್ದಾರೆ. ಅದಕ್ಕೆ ಸಾಕಷ್ಟು ಸುಳಿವು ಸಹ ಕೊಟ್ಟಿದ್ದಾರೆ.

ಈ ಹಿಂದೆ ಹತ್ತು ಚಿತ್ರಗಳ ನಿರ್ದೇಶನ ಮಾಡಿದ್ದಾರೆ ರಿಯಲ್ ಸ್ಟಾರ್. ಇದು ಅವರ ನಿರ್ದೇಶನದಲ್ಲಿ ಮೂಡಿಬರಲಿರುವ 11ನೇ ಚಿತ್ರವಾಗಿದೆ. ಉಪ್ಪಿ 2 ಸಿನಿಮಾ 2015ರಲ್ಲಿ ಬಿಡುಗಡೆಯಾಗಿತ್ತು.

ಹಿಂದೂಸ್ತಾನ್ ಸಮಾಚಾರ್.ಎಂ.ಎಸ್.ಯ.ಮ


 rajesh pande