ಸೆಪ್ಟೆಂಬರ್ 18 - ಸಾಹಸ ಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ, ನಟಿ ಶೃತಿ ಜನ್ಮದಿನ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ): ಸ್ಯಾಂಡಲ್ ವುಡ್ ಅಲ್ಲದೇ ಅಭಿಮಾನಿಗಳ ಪಾಲಿಗೆ ವಿಶೇಷವಾದ ದಿನ. ಸಾಹಸ ಸಿಂಹ ವಿಷ್ಣು
ಮೂರವ ನಟ-ನಟಿಯ ಜನ್ಮದಿನ


ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ): ಸ್ಯಾಂಡಲ್ ವುಡ್ ಅಲ್ಲದೇ ಅಭಿಮಾನಿಗಳ ಪಾಲಿಗೆ ವಿಶೇಷವಾದ ದಿನ. ಸಾಹಸ ಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಹಿರಿಯ ನಟಿ ಶ್ರುತಿ ಜನ್ಮದಿನ ಸೆಪ್ಟೆಂಬರ್ 18. ಈ ವಿಶೇಷ ದಿನವನ್ನು ಆಯಾ ಸ್ಟಾರ್ ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ಆಚರಿಸಿ ಸಂಭ್ರಮಿಸುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಸೆಲೆಬ್ರಿಟಿಗಳಿಗೆ ಹುಟ್ಟು ಹಬ್ಬದ ಶುಭಾಶಯಗಳು ಹರಿದು ಬರುತ್ತಿದೆ.

ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಇಂದು ನಮ್ಮೊಂದಿಗಿದ್ದಿದ್ದರೆ ತಮ್ಮ 71ನೇ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಾಗೂ ಕುಟುಂಬಸ್ಥರ ಜೊತೆ ಆಚರಣೆ ಮಾಡಿಕೊಳ್ಳುತ್ತಿದ್ದರು. ಆದರೆ, ಅವರು ಇಹಲೋಕ ತ್ಯಜಿಸಿ 12 ವರ್ಷಗಳಾಗಿದ್ದು, ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ.

ಸರ್ಕಾರ ಮೈಸೂರಿನ ಹೆಚ್ಡಿ ಕೋಟೆ ಹತ್ತಿರ ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಐದು ಎಕರೆ ಜಮೀನು ನೀಡಿ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದೆ. ಕಳೆದ ವರ್ಷದಿಂದ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್, ವಿಷ್ಣುವರ್ಧನ್ ಮಗಳು ಕೀರ್ತಿ ಸೇರಿದಂತೆ ಕುಟುಂಬ ವರ್ಗ ಹಾಗೂ ಅಭಿಮಾನಿಗಳು ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಷ್ಣುವರ್ಧನ್ ಅವರ ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಅವರು ಫ್ಯಾಮಿಲಿ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಉಪೇಂದ್ರ ಕೇಕ್ ಕಟ್ ಮಾಡಿ 53ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇನ್ನು ಉಪೇಂದ್ರ ಬರ್ತ್ ಡೇ ಪ್ರಯುಕ್ತ ಕಬ್ಜ, ಬುದ್ದಿವಂತ 2, ಲಗಾಮ್ ಚಿತ್ರತಂಡದಿಂದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ.

ಇನ್ನು ಅಳುಮುಂಜಿ ಪಾತ್ರಗಳಿಂದಲೇ, ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ನಟಿ ಶ್ರುತಿ ಕೂಡ ಸೆಪ್ಟೆಂಬರ್ 18ರಂದು ಹುಟ್ಟಿದ್ದಾರೆ. ಈ ಹಿನ್ನೆಲೆ, ಚಿತ್ರರಂಗದವರು ಹಾಗೂ ಅಭಿಮಾನಿಗಳು ಶ್ರುತಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನ ತಿಳಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande