ಸೆಪ್ಚೆಂಬರ್ 21ರವರೆಗೆ ರಾಜ್ಯದಲ್ಲಿ ಭಾರಿ ಮಳೆಯ ನಿರೀಕ್ಷೆ - ಭಾರತೀಯ ಹವಾಮಾನ ಇಲಾಖೆ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ): ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಎಡ
ರಾಜ್ಯದಲ್ಲಿ ಭಾರಿ ಮಳೆ


ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ): ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಆದರೆ ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಗುರುವಾರ ಮಳೆಯ ಆರ್ಭಟ ಕಡಿಮೆಯಾಗಿತ್ತು, ಆದರೆ ಮತ್ತೆ ಸೆಪ್ಟೆಂಬರ್ 18 ರಿಂದ 21ರ ವರೆಗೆ ಭಾರೀ ಮಳೆಯ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದಲ್ಲಿ ಸೆ.18 ಮತ್ತು 19ರಂದು ಸಹ ಮಳೆ ಮುಂದುವರೆಯಲಿದೆ. ಶನಿವಾರ ಹಾಗೂ ಭಾನುವಾರ ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ನಿನ್ನೆ ಹೆಚ್ಚಿನ ಮಳೆಯಾಗಿಲ್ಲ. ಆದರೆ ಇಲಾಖೆಯ ವರದಿ ಪ್ರಕಾರ ಇನ್ನೂ ಮೂರು ದಿನ ಬಿರುಸಿನ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, , ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದರೆ, ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣವಿದ್ದು, ಉಳಿದೆಡೆ ಬಿಸಿಲಿನಿಂದ ಕೂಡಿದೆ. ಎಚ್ಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂಗಾರು ಬಿಕಾನೇರ್, ಜೈಪುರ್ ಹಾಗೂ ಕಡಿಮೆ ಒತ್ತಡದ ಪ್ರದೇಶವಾದ ಪೆಂಡ್ರಾ ರಸ್ತೆ, ಭುವನೇಶ್ವರ ಮೂಲಕ ಪೂರ್ವ ಮಧ್ಯ ಬಂಗಾಳ ಕೊಲ್ಲಿಗೆ ಹಾದು ಹೋಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಹೆಚ್ಚಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ಮೂರು ದಿನ ಮಳೆಯ ಪ್ರಮಾಣ ಹೆಚ್ಚಿರಲಿದೆ ಎಂದು ಆಭರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

.ಕಳೆದ 24 ಗಂಟೆಗಳಲ್ಲಿ, ಉತ್ತರ ಪ್ರದೇಶ, ಉತ್ತರ ಮತ್ತು ಪಶ್ಚಿಮ ಮಧ್ಯಪ್ರದೇಶದ ಕೆಲವು ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗುಜರಾತ್, ದಕ್ಷಿಣ ಕರಾವಳಿ ಆಂಧ್ರ ಪ್ರದೇಶ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ಕರಾವಳಿ ಕರ್ನಾಟಕ, ಈಶಾನ್ಯ ರಾಜಸ್ಥಾನ, ಕೊಂಕಣ ಮತ್ತು ಗೋವಾ, ಲಕ್ಷದ್ವೀಪ, ಕರಾವಳಿ ಆಂಧ್ರಪ್ರದೇಶ, ಮತ್ತು ತೆಲಂಗಾಣದಲ್ಲಿ ಕೂಡ ಸಾಧಾರಣ ಮಳೆಗಿಂತ ಸ್ವಲ್ಪ ಹೆಚ್ಚಿನ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ, ಪೂರ್ವ ಉತ್ತರ ಪ್ರದೇಶ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮತ್ತು ಅಸ್ಸಾಮಿನ ಪೂರ್ವ ಭಾಗಗಳು ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಕರ್ನಾಟಕ, ಕೇರಳ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಒಡಿಶಾದ ಕೆಲವು ಭಾಗಗಳು, ಕೊಂಕಣ ಮತ್ತು ಗೋವಾ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನ ವಿವಿಧ ಭಾಗಗಳಲ್ಲಿ ಮೂರು ದಿನಗಳ ಕಾಲ ಬಿರುಸಿನ ಮಳೆಯಾಗಬಹುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಮುಂಗಾರಿನ ಕೊನೆಯ ತಿಂಗಳಾದ ಸೆಪ್ಟೆಂಬರ್ನಲ್ಲಿ ಹೆಚ್ಚಿನ ಮಳೆ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ

ಹಿಂದೂಸ್ತಾನ್ ಸಮಾಚಾರ್.ಎಂ.ಎಸ್.ಯ.ಮ


 rajesh pande