ಡ್ರೀಮ್ಸ್ ಮೀಟ್ ಡೆಲಿವರಿ ಪುಸ್ತಕ ಲೋಕಾರ್ಪಣೆ
ನ್ಯೂಜಿಲ್ಯಾಂಡ್, 7 ಅಕ್ಟೋಬರ್ (ಹಿ.ಸ): ಆ್ಯಂಕರ್ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾ.
ಡ್ರೀಮ್ಸ್ ಮೀಟ್ ಡೆಲಿವರಿ ಪುಸ್ತಕ ಲೋಕಾರ್ಪಣೆ


ನ್ಯೂಜಿಲ್ಯಾಂಡ್, 7 ಅಕ್ಟೋಬರ್ (ಹಿ.ಸ):

ಆ್ಯಂಕರ್

ನ್ಯೂಜಿಲ್ಯಾಂಡ್ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, ಆಕ್ಲೆಂಡ್ನಲ್ಲಿಂದು ೨೦೨೨ರ ಕಿವಿ ಇಂಡಿಯನ್ ಹಾಲ್ ಆಫ್ ಫೇಮ್ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮೋದಿ @ ೨೦; ಡ್ರೀಮ್ಸ್ ಮೀಟ್ ಡೆಲಿವರಿ ಪುಸ್ತಕ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ನ್ಯೂಜಿಲ್ಯಾಂಡ್ ಪ್ರಧಾನಮಂತ್ರಿ ಜೆಸಿಂದಾ ಆರ್ಡರ್ನ್ ಉಪಸ್ಥಿತರಿದ್ದರು. ನ್ಯೂಜಿಲ್ಯಾಂಡ್ನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಭಾರತೀಯ ಸಮುದಾಯದವರನ್ನು ಸನ್ಮಾನಿಸಲಾಯಿತು.

ಇದಕ್ಕೂ ಮುನ್ನಾ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, ನ್ಯೂಜಿಲ್ಯಾಂಡ್ನ ಪ್ರಧಾನಮಂತ್ರಿ ಜೆಸಿಂದ ಆರ್ಡರ್ನ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ನಂತರ ಟ್ವೀಟ್ ಸಂದೇಶದಲ್ಲಿ ಅವರು, ಉಭಯ ದೇಶಗಳ ನಡುವಿನ ಪರಸ್ಪರ ಸಹಕಾರ ವೃದ್ಧಿ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ. ಪರಸ್ಪರ ವ್ಯಾಪಾರ ವೃದ್ಧಿ ಸೇರಿದಂತೆ ಹಲವಾರು ವಿಚಾರಗಳ ಕುರಿತು ಚರ್ಚೆ ಸಂದರ್ಭದಲ್ಲಿ ಒಮ್ಮತ ವ್ಯಕ್ತವಾಯಿತು ಎಂದು ಜೈಶಂಕರ್ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande