ಟ್ಯಾಂಕರ್-ಬೈಕ್ ಡಿಕ್ಕಿ3 ಸಾವು
ಚಿತ್ರದುರ್ಗ, 27 ನವೆಂಬರ್ (ಹಿ.ಸ): ಆ್ಯಂಕರ್:: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಚಿತ್ರದ
74


ಚಿತ್ರದುರ್ಗ, 27 ನವೆಂಬರ್ (ಹಿ.ಸ):

ಆ್ಯಂಕರ್:: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ. ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಕೈನಡು ಗ್ರಾಮದ ನಿವಾಸಿಗಳಾದ ಉಜ್ಜೀರಪ್ಪ(38), ರವಿಕುಮಾರ್(29), ಗಿರೀಶ್(23) ಮೃತ ದುರ್ದೈವಿಗಳು. ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande