ಕೋಲಾರ , 28 ನವೆಂಬರ್ (ಹಿ.ಸ):
ಆ್ಯಂಕರ್:: ದ್ವಿಚಕ್ರ ವಾಹನಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಚಿಕ್ಕ ಅಂಕಂಡಹಳ್ಳಿ ಗೇಟ್ ಬಳಿ ವೇಗವಾಗಿ ಬಂದ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮೃತ ಬೈಕ್ ಸವಾರರ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಕೆಜಿಎಫ್ನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್ ಡಿಕ್ಕಿ ಹೊಡೆದಿದೆ.
ಹಿಂದೂಸ್ತಾನ್ ಸಮಾಚಾರ್