ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಭಾರತ
ಕ್ರೈಸ್ಟ್ಚರ್ಚ್, 30 ನವೆಂಬರ್ (ಹಿ.ಸ): ಆ್ಯಂಕರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ 3ನೇ ಹಾಗೂ ಕೊನೆಯ ಏಕದಿನ
ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಭಾರತ


ಕ್ರೈಸ್ಟ್ಚರ್ಚ್, 30 ನವೆಂಬರ್ (ಹಿ.ಸ):

ಆ್ಯಂಕರ್ :

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ 3ನೇ ಹಾಗೂ ಕೊನೆಯ ಏಕದಿನ ಪಂದ್ಯ ಮಳೆಗೆ ಆಹುತಿಯಾಗಿದೆ. ಈ ಮೂಲಕ ಕಿವೀಸ್ ಪಡೆ ಏಕದಿನ ಸರಣಿಯನ್ನು 1-0 ಅಂತರದಿಂದ ತಮ್ಮದಾಗಿಸಿಕೊಂಡಿದೆ. ಈ ಸರಣಿಗೂ ಮುನ್ನ ನಡೆದ ಟಿ20 ಸರಣಿಯನ್ನು ನ್ಯೂಜಿಲೆಂಡ್ ತಂಡ ಕಳೆದುಕೊಂಡಿತ್ತು. ಆದರೆ ಏಕದಿನ ಸರಣಿಯಲ್ಲಿ ಸಿಕ್ಕ ಮೊದಲ ಗೆಲುವು ಕೇನ್ ಪಡೆಯನ್ನು ಸರಣಿ ಗೆಲ್ಲುವಂತೆ ಮಾಡಿತು. 3ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾದ (Team India) ಸೋಲು ಖಚಿತವಾಗಿತ್ತು. ಆದರೆ ಈ ಪಂದ್ಯಕ್ಕೆ ಅಡ್ಡಿಪಡಿಸಿದ ವರುಣ ಧವನ್ ಪಡೆಯ ಸರಣಿ ಸೋಲಿನ ತೀವ್ರತೆಯನ್ನು ಕೊಂಚ ಕಡಿತಗೊಳಿಸಿದ. ಈ ಪಂದ್ಯದಲ್ಲಿ ಮೊದಲಯ ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 219 ರನ್ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಕಿವೀಸ್ ಪಡೆ ನೀರು ಕುಡಿದಷ್ಟು ಸುಲಭವಾಗಿ ಟಾರ್ಗೆಟ್ ಬೆನ್ನಟ್ಟಿತ್ತು. ಆದರೆ ಕಿವೀಸ್ ಇನ್ನಿಂಗ್ಸ್ನ 18ನೇ ಓವರ್ನಲ್ಲಿ ಎಂಟ್ರಿಕೊಟ್ಟ ವರುಣ ಪಂದ್ಯವನ್ನು ನಿಲ್ಲಿಸುವಲ್ಲಿ ಯಶಸ್ವಿಯಾದ.

ಈ ಸರಣಿಯುದ್ದಕ್ಕೂ ಟಾಸ್ ಗೆಲ್ಲುವಲ್ಲಿ ವಿಫಲರಾದ ನಾಯಕ ಧವನ್ ಕೊನೆಯ ಪಂದ್ಯದಲ್ಲೂ ಟಾಸ್ ಸೋತರು. ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಎಂದಿನಂತೆ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲೆರಡು ಪಂದ್ಯಗಳಲ್ಲಿ ಟಾಸ್ ಸೋತರು ಉತ್ತಮ ಆರಂಭ ಮಾಡಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ ಎಡವಿತು. ಆರಂಭಿಕರಾಗಿ ಕಣಕ್ಕಿಳಿದಿದ್ದ ಗಿಲ್ ಹಾಗೂ ಧವನ್ ರನ್ ಗಳಿಸಲು ಪರದಾಡಿದರು. ಅದರಲ್ಲೂ ಉತ್ತಮ ಫಾರ್ಮ್ನಲ್ಲಿದ್ದ ಗಿಲ್ಗೆ ಮೊದಲ 6 ಓವರ್ಗಳಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಆರಂಭದಲ್ಲೇ ಒತ್ತಡಕ್ಕೆ ಸಿಲುಕಿದ ಭಾರತ ಒಂದರ ಹಿಂದೆ ಒಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು

ಹಿಂದೂಸ್ತಾನ್ ಸಮಾಚಾರ್


 rajesh pande