ಪಿಎಫ್ಐ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು, 30 ನವೆಂಬರ್ (ಹಿ.ಸ): ಆ್ಯಂಕರ್ : ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದನ್ನು ಪ್ರಶ್ನಿಸ
ಇಉಉಉಉ


ಬೆಂಗಳೂರು, 30 ನವೆಂಬರ್ (ಹಿ.ಸ):

ಆ್ಯಂಕರ್ : ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ವ ಜಾಗೊಳಿಸಿದೆ. ಈ ಮೂಲಕ ಕೇಂದ್ರ ಸರ್ಕಾರದ ಪಿಎಫ್ಐ ನಿಷೇಧ ಆದೇಶವನ್ನು ಎತ್ತಿಹಿಡಿದಿದೆ.

ಪಿಎಫ್ಐ ಬ್ಯಾನ್ ಪ್ರಶ್ನಿಸಿ ನಾಸೀರ್ ಅಲಿ ಎನ್ನುವವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು (ನ. 28) ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ , ತೀರ್ಪನ್ನು ನವೆಂಬರ್ 30ಕ್ಕೆ ಕಾಯ್ದಿರಿಸಿತ್ತು. ಇದೀಗ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ನಾಸೀರ್ ಅಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಇದರೊಂದಿಗೆ ಕೇಂದ್ರ ಸರ್ಕಾರ ಆದೇಶವನ್ನು ಎತ್ತಿಹಿಡಿದಿದೆಗಣ್ಯ ವ್ಯಕ್ತಿಗಳ ಹತ್ಯೆಗೆ ಸಂಚು, ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಪಿತೂರಿ, ಉಗ್ರ ಸಂಘಟನೆಗಳ ಜೊತೆ ನಿಕಟ ಸಂಪರ್ಕ ಹೊಂದಿದ ಆರೋಪದಡಿ ಕೇಂದ್ರ ಗೃಹ ಇಲಾಖೆ ಪಿಎಫ್ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ನಾಸಿರ್ ಪಾಷಾ ಎನ್ನುವವರು ಹೈಕೋರ್ಟ್ಗೆ ರಿಟ್ ಅರ್ಜಿ ಅಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಇಂದಿಗೆ (ನವೆಂಬರ್ 30) ತೀರ್ಪು ಕಾಯ್ದಿರಿಸಿತ್ತು.

ಹಿಂದೂಸ್ತಾನ್ ಸಮಾಚಾರ್


 rajesh pande