ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ಇನ್ನಿಲ್ಲ
ಮಂಗಳೂರು, 30 ನವೆಂಬರ್ (ಹಿ.ಸ): ಆ್ಯಂಕರ್ : ಮಂಗಳೂರು: ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ
ೀೀ


ಮಂಗಳೂರು, 30 ನವೆಂಬರ್ (ಹಿ.ಸ):

ಆ್ಯಂಕರ್ :

ಮಂಗಳೂರು: ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಅವರು ವಯೋಸಹಜ ಅನಾರೋಗ್ಯ ಕಾರಣದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ ಕಲಾವಿದರೂ ಆಗಿದ್ದ ಸುಂದರ್ ರಾವ್ , ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20 ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬಳೆ ಸುಂದರ್ ರಾವ್ ಅವರು 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಇವರು ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande