ಭೀಕರ ಅಪಘಾತ; 6 ಜನ ಸಾವು
ಬಹ್ರೈಚ್ , 30 ನವೆಂಬರ್ (ಹಿ.ಸ): ಆ್ಯಂಕರ್ :: ಉತ್ತರ ಪ್ರದೇಶದ ಬಹ್ರೈಚ್ನ ತಪ್ಪೆ ಸಿಪಾಹ್ ಪ್ರದೇಶದಲ್ಲಿ ಬಸ್ ಮತ್ತು
ಹಗಬಪ


ಬಹ್ರೈಚ್ , 30 ನವೆಂಬರ್ (ಹಿ.ಸ):

ಆ್ಯಂಕರ್ :: ಉತ್ತರ ಪ್ರದೇಶದ ಬಹ್ರೈಚ್ನ ತಪ್ಪೆ ಸಿಪಾಹ್ ಪ್ರದೇಶದಲ್ಲಿ ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಲಕ್ನೋ-ಬಹ್ರೈಚ್ ಹೆದ್ದಾರಿಯಲ್ಲಿ ಇಂದು (ಬುಧವಾರ) ಬೆಳಗ್ಗೆ ಬಸ್ಗೆ ಟ್ರಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ 4.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮಂಜಿನಿಂದಾಗಿ ವೇಗವಾಗಿ ಬಂದ ಟ್ರಕ್ ಲಕ್ನೋ ಈದ್ಗಾ ಡಿಪೋದ ಬಳಿ ಬಸ್ಗೆ ಡಿಕ್ಕಿ ಹೊಡೆದಿದೆ. ಜರ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಘರ್ಘರಾ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಮಂಜು ಮುಸುಕಿದ ಕಾರಣದಿಂದ ರಸ್ತೆ ಕಾಣದೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande