,ಕ್ರೈಸ್ಟ್ಚರ್ಚ್ 30 ನವೆಂಬರ್ (ಹಿ.ಸ):
ಆ್ಯಂಕರ್ :
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಕ್ರೈಸ್ಟ್ ಚರ್ಚ್ನ ಹಾಗ್ಲೇ ಓವಲ್ನಲ್ಲಿ ಇಂದು ನಡೆಯಲಿದೆ. ಭಾರತೀಯ ಕಾಲಮಾನ ಬೆಳಿಗ್ಗೆ ೭ ಗಂಟೆಗೆ ಪಂದ್ಯ ಆರಂಭವಾಗಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಸಮಬಲ ಸಾಧಿಸಲು ಇಂದಿನ ಪಂದ್ಯದತ್ತ ಗಮನ ಹರಿಸಿದೆ. ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ೭ ವಿಕೆಟ್ಗಳ ಅಂತರದಿಂದ ಜಯಗಳಿಸಿತ್ತು. ೨ನೇ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿತ್ತು. ಇಂದು ನಡೆಯಲಿರುವ ೩ನೇ ಹಾಗೂ ಅಂತಿಮ ಏಕದಿನ ಪಂದ್ಯದ ಮೇಲೆಯೂ ವರುಣನ ಅವಕೃಪೆ ಎದುರಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್