ದತ್ತ ಜಯಂತಿ; ಹೈಕೋರ್ಟ್ ಅಸ್ತು
ಬೆಂಗಳೂರು, 30 ನವೆಂಬರ್ (ಹಿ.ಸ): ಆ್ಯಂಕರ್ :ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ವಿವಾದಿತ ದತ್ತಾತ್ರೇಯ ಬಾಬಾಬುಡನ್ ಗ
ದತ್ತ ಜಯಂತಿ; ಹೈಕೋರ್ಟ್ ಅಸ್ತು


ಬೆಂಗಳೂರು, 30 ನವೆಂಬರ್ (ಹಿ.ಸ):

ಆ್ಯಂಕರ್ :ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ವಿವಾದಿತ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿತ್ತು. ಸದ್ಯ ಇಂದು ನಡೆದ ವಿಚಾರಣೆಯಲ್ಲಿ ಡಿ.6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿ ವಿಚಾರಕ್ಕೆ ಸಂಬಂಧಿಸಿ ವಿವಾದಿತ ಸ್ಥಳದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ಸರ್ಕಾರ ರಚಿಸಿದ ಸಮಿತಿ, ಭಕ್ತರಿಂದ ಪೂಜಾವಿಧಿ ನಡೆಸಲು ದತ್ತ ಪಾದುಕೆ ಪೂಜೆಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಸರ್ಕಾರ ಈಗಾಗಲೇ ನಿರ್ವಹಣಾ ಸಮಿತಿ ರಚಿಸಿದೆ. ಹಿಂದೂ, ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಮಾಡಲಾಗಿದ್ದು ಪ್ರತಿದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿಗೆ ಅನುಮತಿ ನೀಡಲು ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್ಗೆ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದರು. ಅದರಂತೆ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅಸ್ತು ಎಂದಿದೆ. ಹಾಗೂ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande