ಕಾಯಕ ಬಂದುಗಳಿಗೆ ಶ್ರಮ ಚೇತನ ಪ್ರಶಸ್ತಿ
ರಾಯಚೂರು, 30 ನವೆಂಬರ್ (ಹಿ.ಸ): ಆ್ಯಂಕರ್:ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಸೌಲಭ
ಲಿಂಗತ್ವ ಅಲ್ಪಸಂಖ್ಯಾತರಿಗೆ ಶ್ರಮ ಚೇತನ ಪ್ರಶಸ್ತಿ ಪ್ರದಾನ


ಲಿಂಗತ್ವ ಅಲ್ಪಸಂಖ್ಯಾತರಿಗೆ ಶ್ರಮ ಚೇತನ ಪ್ರಶಸ್ತಿ ಪ್ರದಾನ


ರಾಯಚೂರು, 30 ನವೆಂಬರ್ (ಹಿ.ಸ):

ಆ್ಯಂಕರ್:ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವುದರ ಜೊತೆಗೆ ನರೇಗಾ ಯೋಜನೆಯಡಿ ಕಾಯಕ ಬಂದುಗಳಾಗಿ ಕಾರ್ಯನಿರ್ವಹಿಸುತ್ತಿರುವ ರಾಯಚೂರು ಜಿಲ್ಲೆಯ ಮೂವರು ಲಿಂಗತ್ವ ಅಲ್ಪ ಸಂಖ್ಯಾತರ ಕಾಯಕ ಬಂದುಗಳಿಗೆ ಶ್ರಮ ಚೇತನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಲ್ಕಾವಟಗಿ ಗ್ರಾಮ ಪಂಚಾಯತಿ ಪಾರ್ವತಿ ಜೋಗಮ್ಮ, ಮಾನವಿ ತಾಲೂಕಿನ ಚಿಕ್ಕಕೋಟ್ನೆಕಲ್ ಗ್ರಾಮ ಪಂಚಾಯತಿ ಜೋಗಮ್ಮ ಹಾಗೂ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯತಿಯ ಅಂಕಿತಾ ಅವರು ಶ್ರಮ ಚೇತನ ಪ್ರಶಸ್ತಿಗೆ ಭಾಜನರಾಗಿದ್ದವರು.

ನರೇಗಾ ಮತ್ತು ಗ್ರಾಮೀಣ ಜೀವನೋಪಾಯ ಅಭಿಯಾನ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಂಡಿರುವ ಅವರಿಗೆ ಬಾಗಲಕೋಟೆ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಎನ್.ಆರ್.ಎಲ್.ಎಮ್. ಸಂಜೀವಿನಿ ಸಹಯೋಗದಲ್ಲಿ ನಡೆದ ಶ್ರಮ ಚೇತನ 2022ರ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹಾದೇವನ್ ಹಾಗೂ ಆಯುಕ್ತಾರಾದ ಶಿಲ್ಪನಾಗ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಾದ ಕುರಿ, ಮೇಕೆ, ದನದ ಶೆಡ್ ನಿರ್ಮಿಸಲು ನರೇಗಾದಡಿ ಅವಕಾಶವಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಸಹ ನೀಡಲಾಗುತ್ತದೆ. ಈ ಎಲ್ಲ ಯೋಜನೆಗಳ ಲಾಭ ಪಡೆಯಲು ಲಿಂಗತ್ವ ಅಲ್ಪಸಂಖ್ಯಾತರ ಪಡೆಯಲು ಮುಂದೆ ಬರಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ಸರಕಾರ ಈ ನಿಟ್ಟಿನಲ್ಲಿ ವಿಶೇಷ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ನರೇಗಾ ಯೋಜನೆಯಡಿ ಬದುಕು ರೂಪಿಸಿಕೊಂಡಿರುವ ರಾಯಚೂರು ಜಿಲ್ಲೆಯ ಮೂವರು ಲಿಂಗತ್ವ ಅಲ್ಪಸಂಖ್ಯಾತರರಿಗೆ ಶ್ರಮ ಚೇತನ ಪ್ರಶಸ್ತಿಗೆ ಪಾತ್ರರಾಗಿರುವುದು ಶ್ಲಾಘನೀಯ. ಜಿಲ್ಲಾ ಪಂಚಾಯತ್ ಸಿಇಓ ಶಶಿಧರ ಕುರೇರ ಅವರು ಹೇಳಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರರು ಸಹ ಸಮಾಜದ ಮುಖ್ಯವಾಹಿನಿಗೆ ಬಂದು ನರೇಗಾದಡಿಯಲ್ಲಿ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಲಿದೆ. ಎಂದರು.


 rajesh pande