ವಿಕ್ರಮ್ ಕಿರ್ಲೋಸ್ಕರ್ ಅಂತ್ಯಕ್ರಿಯೆ
ಬೆಂಗಳೂರು, 30 ನವೆಂಬರ್ (ಹಿ.ಸ): ಆ್ಯಂಕರ್ : ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(
ುಾ


ಬೆಂಗಳೂರು, 30 ನವೆಂಬರ್ (ಹಿ.ಸ):

ಆ್ಯಂಕರ್ :

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(64) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ.

ವಾಹನ ಉದ್ಯಮದಲ್ಲಿ ಭಾರತದ ದಿಗ್ಗಜರಲ್ಲಿ ಒಬ್ಬರಾದ, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಕುಸಿದು ಬಿದ್ದರು. ಆ ತಕ್ಷಣವೇ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಮಂಗಳವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಬಗ್ಗೆ ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳಲ್ಲಿ ದೃಢಪಡಿಸಿದೆ.

ನಾವು ನಿಮಗೆ ಈ ವಿಚಾರ ತಿಳಿಸಲು ತುಂಬಾ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನಮ್ಮ ಆಳವಾದ ಸಹಾನುಭೂತಿಗಳನ್ನು ವ್ಯಕ್ತಪಡಿಸುತ್ತೇವೆ. 30 ನವೆಂಬರ್ 2022 ರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯುತ್ತೆ ಎಂದು ಟ್ವೀಟ್ ಮಾಡಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande