ಹೊಸಪೇಟೆ : ವಿಶ್ವ ಏಡ್ಸ್ ದಿನಾಚರಣೆ ಡಿ.1ರಂದು
ಹೊಸಪೇಟೆ, 30 ನವೆಂಬರ್ (ಹಿ.ಸ): ಆ್ಯಂಕರ್:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸ
ಹೊಸಪೇಟೆ : ವಿಶ್ವ ಏಡ್ಸ್ ದಿನಾಚರಣೆ ಡಿ.1ರಂದು


ಹೊಸಪೇಟೆ, 30 ನವೆಂಬರ್ (ಹಿ.ಸ):

ಆ್ಯಂಕರ್:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ವಿಶ್ವಏಡ್ಸ್ ದಿನಾಚರಣೆಯನ್ನು ಡಿ.1ರಂದು ಹೊಸಪೇಟೆಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಮೆರವಣಿಗೆ: ವಿಶ್ವಏಡ್ಸ್ ದಿನಾಚರಣೆಯ ಅಂಗವಾಗಿ ಡಿ.1ರಂದು ಬೆಳಗ್ಗೆ 9.30ಕ್ಕೆ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಜಾಥವು ಡಿ.ಎಚ್.ಒ ಕಚೇರಿಯಿಂದ ಆರಂಭಗೊಂಡು ಡಾ.ಪುನೀತ್ರಾಜಕುಮಾರ ಸರ್ಕಲ್, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್, ವಿಜಯನಗರ ಕಾಲೇಜು ಮುಖಾಂತರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ. ಜಾಥಾಕ್ಕೆ ಜೆ.ಎಂ.ಎಫ್.ಸಿ ನ್ಯಾಯಧೀಶರಾದ ಕಿಷನ್ ಮಾಡಲಿಗಿ ಹಾಗೂ ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಚಾಲನೆ ನೀಡಲಿದ್ದು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಯವರು ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ.


 rajesh pande