ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್
ಬೆಂಗಳೂರು, 23 ಜೂನ್ (ಹಿ.ಸ):ಆ್ಯಂಕರ್ : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ ನ ಚಿತ
ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್


ಬೆಂಗಳೂರು, 23 ಜೂನ್ (ಹಿ.ಸ):ಆ್ಯಂಕರ್ :

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ ನ ಚಿತ್ರದ ಮುಹೂರ್ತ ಇಂದು ಬೆಂಗಳೂರಿನ ರಾಕ್ ಲೈನ್ ವೆಂಕಟೇಶ್ ಸ್ಟುಡಿಯೋದಲ್ಲಿರುವ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ಮೊದಲ ದೃಶ್ಯಕ್ಕೆ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಿತ್ರಕ್ಕೆ ಚಾಲನೆ ನೀಡಿದರು. ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ.

ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾದಲ್ಲಿ ಹೊಸ ಬಗೆಯ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರಂತೆ ನಿರ್ದೇಶಕರು. ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾಗೆ ಸದ್ಯಕ್ಕೆ ಪ್ರೊಡಕ್ಷನ್ ನಂ 27 ಎಂದು ಹೆಸರಿಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande