ಮರವಂತೆ ಸಮುದ್ರಕ್ಕೆ ಉರುಳಿದ ಕಾರು- ಓರ್ವ ಸಾವು, ಇನ್ನೋರ್ವನಿಗಾಗಿ ಹುಡುಕಾಟ
ಉಡುಪಿ, 03ಜುಲೈ (ಹಿ.ಸ):ಆ್ಯಂಕರ್: : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು
್


ಉಡುಪಿ, 03ಜುಲೈ (ಹಿ.ಸ):ಆ್ಯಂಕರ್:

: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ.

ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ ಕಾರು ಸಮುದ್ರಕ್ಕೆ ಬಿದ್ದಿದೆ. ಆ ಕಾರಿನಲ್ಲಿ ನಾಲ್ವರಿದ್ದರು. ಓರ್ವ ಕಾರಿನೊಳಗೆ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಆತನಿಗಾಗಿ ಅಗ್ನಿಶಾಮಕದಳ, ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande