ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಪಕ್ಷ ಅಧಿಕಾರಕ್ಕೆ ತರಲು ಅಮಿತ್ ಶಾ ಪಣ
ಹೈದರಾಬಾದ್, 3 ಜುಲೈ (ಹಿ.ಸ): ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿ
ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಪಕ್ಷ ಅಧಿಕಾರಕ್ಕೆ ತರಲು ಅಮಿತ್ ಶಾ ಪಣ


ಹೈದರಾಬಾದ್, 3 ಜುಲೈ (ಹಿ.ಸ):

ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಕ್ಷದ ಮುಂದಿನ ರಾಜಕೀಯ ನಿರ್ಣಯಗಳನ್ನು ಮಂಡಿಸಿ. ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರುವುದೇ ನಮ್ಮ ಮುಂದಿನ ಗುರಿ ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಗುಜರಾತ್, ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ಪುದುಚೇರಿಯಲ್ಲಿ ನಡೆಯಲಿರುವ ಚುನಾವಣೆಗಳು ಮತ್ತು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ನಿರ್ಣಯಗಳನ್ನು ಮಂಡಿಸಲಾಯಿತು.

ಬಿಜೆಪಿ ಸಂಸದರು ತಮ್ಮ-ತಮ್ಮ ಕ್ಷೇತ್ರಗಳಿಗೆ ಹೋಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಈ ಕಾರ್ಯಕಾರಿಣಿ ನಂತರ ಸಂಸದರು ಮೂರು ದಿನಗಳ ಕಾಲ ತಮ್ಮ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷವನ್ನು ಬಲಪಡಿಸಲು ಶ್ರಮಿಸುವಂತೆ ಸೂಚಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ 200 ಸಂಸದೀಯ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಈ ಕ್ಷೇತ್ರಗಳ ಹೊಣೆಯನ್ನು ಕೇಂದ್ರ ಸಚಿವರಿಗೆ ವಹಿಸಲು ನಿರ್ಧರಿಸಲಾಗಿದೆ.

ರಾಜಕೀಯ ನಿರ್ಣಯಗಳನ್ನು ಮಂಡಿಸಿದ ವೇಳೆ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಕಾರಾತ್ಮಕ ರಾಜಕಾರಣದಲ್ಲಿ ತೊಡಗಿದೆ. ಅಲ್ಲದೇ, ಅವಕಾಶವಾದಿ ಮತ್ತು ಭ್ರಷ್ಟ ರಾಜಕಾರಣಕ್ಕೆ ಕಾಂಗ್ರೆಸ್ ವೇದಿಕೆಯಾಗಿದೆ ಎಂದು ಟೀಕಿಸಿದರು.

ಇದೇ ವೇಳೆ ಪಶ್ಚಿಮ ಬಂಗಾಳ ಮತ್ತು ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande