ಕೊಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ಸಾವು
ಬೆಂಗಳೂರು, 03ಜುಲೈ (ಹಿ.ಸ):ಆ್ಯಂಕರ್: ಕುಟುಂಬ ಸಮೇತರಾಗಿ ಮಹಾರಾಷ್ಟ್ರದ ಶಿರಡಿಗೆ ಹೋಗಿ ವಾಪಸಾಗುತ್ತಿದ್ದ ಬೆಂಗಳೂರು ಮೂ
ಕೊಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ಸಾವು


ಬೆಂಗಳೂರು, 03ಜುಲೈ (ಹಿ.ಸ):ಆ್ಯಂಕರ್:

ಕುಟುಂಬ ಸಮೇತರಾಗಿ ಮಹಾರಾಷ್ಟ್ರದ ಶಿರಡಿಗೆ ಹೋಗಿ ವಾಪಸಾಗುತ್ತಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಿನಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಂಗಳೂರಿನ ಉತ್ತರ ಮೀನಾಕ್ಷಿ ನಗರದ ತ್ರಿಲೇಶ (42), ಸಂಜನಾ ಮಹೇಶ್ವರಿ (27), ಜಿತಿಯಾ ತ್ರಿಲೇಶ(11) ಮತ್ತು ಅರಿಣಿ (40) ಮೃತಪಟ್ಟವರು.

ಕಂಟೈನರ್ ಲಾರಿಯೊಂದು ಕೆಟ್ಟು ನಿಂತಿತ್ತು. ಆದರೆ, ಅದರ ಚಾಲಕ ರಸ್ತೆಯಲ್ಲಿಯೇ ನಿಲ್ಲಿಸಿದ್ದ. ಇದಕ್ಕೆ ತ್ರಿಲೇಶ್ ಅವರ ಕಾರು ಡಿಕ್ಕಿ ಹೊಡೆದಿದೆ. ಆಗ ಇದೆ ವೇಳೆಗೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅರಿಣಿಯವರು ತೀವ್ರವಾಗಿ ಗಾಯಗೊಂಡಿದ್ದರಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಅಸುನೀಗಿದರು ಎಂದು ಕೊಲ್ಲಾಪುರ ಪೊಲೀಸರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande