ನ್ಯಾಯಾಂಗ ಸ್ಥಿತಿ ಕುರಿತು ಕಪಿಲ್ ಸಿಬಲ್ ಕಳವಳ
ನವದೆಹಲಿ, 03 ಜುಲೈ (ಹಿ.ಸ): ಆ್ಯಂಕರ್ : ಪ್ರಸ್ತುತ ನ್ಯಾಯಾಂಗದ ಸ್ಥಿತಿ ಬಗ್ಗೆ ತ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ವಕ
ನ್ಯಾಯಾಂಗ ಸ್ಥಿತಿ ಕುರಿತು ಕಪಿಲ್ ಸಿಬಲ್ ಕಳವಳ


ನವದೆಹಲಿ, 03 ಜುಲೈ (ಹಿ.ಸ):

ಆ್ಯಂಕರ್ : ಪ್ರಸ್ತುತ ನ್ಯಾಯಾಂಗದ ಸ್ಥಿತಿ ಬಗ್ಗೆ ತ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯಾಯಾಂಗದಲ್ಲಿರುವ ಕೆಲವು ಸದಸ್ಯರು ನಾವು ತಲೆ ತಗ್ಗಿಸುವಂತೆ ಮಾಡಿದರು ಮತ್ತು ಇತ್ತೀಚಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ನಾನು ನಾಚಿಕೆಯಿಂದ ತಲೆ ತಗ್ಗಿಸುತ್ತೇನೆ ಎಂದು ಸುದ್ದಿಸಂಸ್ಥಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಉತ್ತರ ವರ್ಷಗಳಲ್ಲಿ, ವಾಕ್ ಸ್ವಾತಂತ್ರ್ಯ ಮತ್ತು ಅದನ್ನು ಸುಪ್ರೀಂ ಕೋರ್ಟ್ ಹೇಗೆ ವ್ಯಾಖ್ಯಾನಿಸುತ್ತಿರುವ ಬಗ್ಗೆ, ಸಂವಿಧಾನಾತ್ಮಕವಾಗಿ ಒಪ್ಪುವಂತಹ ಸಂಗತಿಗಳಿಗೆ ತಡೆಯೊಡ್ಡುತ್ತಿದೆ ಎಂದು ಹೇಳಿದರು.

ಪ್ರತಿನಿತ್ಯ ಕಾನೂನು ಸುವ್ಯವಸ್ಥೆ ಉಲ್ಲಂಘನೆಯಾಗುತ್ತಿದೆ. ಪ್ರಸ್ತುತ ಬಿಜೆಪಿ ಸರ್ಕಾರ ಕಾಂಗ್ರೆಸ್-ಮುಕ್ತ ಭಾರತ ಮಾತ್ರವಲ್ಲದೆ ಪ್ರತಿಪಕ್ಷಗಳೇ ಇಲ್ಲದ ಭಾರತ'ವನ್ನು ಬಯಸುತ್ತಿದೆ ಎಂದು ಅವರು ಆರೋಪಿಸಿದರು.

ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನ್ಯಾಯಾಂಗದ ಮೇಲೂ ಪ್ರಭಾವ ಬೀರುವ ಮೂಲಕ ದೇಶದಲ್ಲಿ ಅಘೋಷಿಸಿತ ತುರ್ತು ಪರಿಸ್ಥಿತಿ ಇದೆ ಕಳವಳ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande