ಸಲ್ಮಾನ್ ಹತ್ಯೆಗೂ ಬಿಷ್ಣೋಯಿ ಗ್ಯಾಂಗ್ ಪಿತೂರಿ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ): ಆ್ಯಂಕರ್: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೂ
ಸಲ್ಮಾನ್ ಹತ್ಯೆಗೂ ಬಿಷ್ಣೋಯಿ ಗ್ಯಾಂಗ್ ಪಿತೂರಿ


ನವದೆಹಲಿ, 11 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೂ ಸಂಚು ರೂಪಿಸಿದ್ದ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.

ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರು ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಹೊಣೆಯನ್ನು ಇದೇ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿದೆ.

ಸದ್ಯ ಜೈಲಿನಲ್ಲಿರುವ ಬಿಷ್ಣೋಯಿ ಸೂಚನೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಹತ್ಯೆಗೆ ಪಿತೂರಿ ನಡೆಸಲಾಗಿತ್ತು ಎಂದು ಅವರು ತಿಳಿಸಿದರು.

ಮೂಸೆವಾಲಾ ಹತ್ಯೆ ಆರೋಪಿ ಕಪಿಲ್ ಪಂಡಿತ್ ನನ್ನು ತನಿಖೆಗೆ ಒಳಪಡಿಸಿದಾಗ ಈ ಮಾಹಿತಿ ಬಹಿರಂಗವಾಗಿದೆ. ಸಲ್ಮಾನ್ ರನ್ನು ಕೊಲೆ ಮಾಡುವ ವಿಚಾರವಾಗಿ ಬಿಷ್ಣೋಯಿ ಗ್ಯಾಂಗ್ ತಮ್ಮನ್ನು ಸಂಪರ್ಕಿಸಿತ್ತು ಎಂದು ಕಪಿಲ್ ಹೇಳಿಕೆ ನೀಡಿದ್ದಾನೆ ಎಂದು ಡಿಜಿಪಿ ಸ್ಪಷ್ಟಪಡಿಸಿದ್ದಾರೆ.

ಮೇ 29 ರಂದು ಮೂಸೆವಾಲಾ ಅವರ ಹತ್ಯೆ ನಡೆದಿತ್ತು. ಈ ಘಟನೆ ನಡೆದ ಬಳಿಕ ಸಲ್ಮಾನ್ ಖಾನ್ ಅವರಿಗೂ ಬೆದರಿಕೆ ಬಂದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಹಿಂದೂಸ್ತಾನ್ ಸಮಾಚಾರ್


 rajesh pande