ಸಸಿ ನೆಟ್ಟು ಮೋದಿ ಜನ್ಮದಿನ ಆಚರಿಸಿದ ನಟ ಅನಂತನಾಗ್
ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನದ ನಿಮಿತ್ತ ಹಿರಿಯ ನಟ ಮತ್ತು
ಸಸಿ ನೆಟ್ಟು ಮೋದಿ ಜನ್ಮದಿನ ಆಚರಿಸಿದ ನಟ ಅನಂತನಾಗ್


ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನದ ನಿಮಿತ್ತ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತನಾಗ್ ಅವರು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಜೊತೆಗೂಡಿ ಸದಾಶಿವ ನಗರದ ಪೂಜಾರಿ ಲೇಔಟ್ನಲ್ಲಿ ಸಸಿ ನೆಟ್ಟು, ಪ್ರಧಾನಿ ಜನ್ಮದಿನ ಆಚರಿಸಿದರು.

ಬಳಿಕ ಮಾತನಾಡಿದ ಅವರು ಮೋದಿಯವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವವು ದೇಶಕ್ಕೆ ಹೊಸ ಚೈತನ್ಯ ತಂದಿದೆ. ಭಗವಂತ ಅವರಿಗೆ ಆಯುರ್ ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಅನಂತನಾಗ್ ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande