ರಾಮಜನ್ಮಭೂಮಿಯ ಆಚಾರ್ಯ ಧರ್ಮೇಂದ್ರ ನಿಧನ
ಜೈಪುರ್, 19 ಸೆಪ್ಟೆಂಬರ್ (ಹಿ.ಸ) ಆ್ಯಂಕರ್ : : ರಾಮಜನ್ಮಭೂಮಿ ಆಂದೋಲನದಲ್ಲಿ ಬಹುದೊಡ್ಡ ಪಾತ್ರ ವಹಿಸಿದ್ದ ಪ್ರಮುಖ ಹಿಂ
ೀಪೀ


ಜೈಪುರ್, 19 ಸೆಪ್ಟೆಂಬರ್ (ಹಿ.ಸ)

ಆ್ಯಂಕರ್ :

: ರಾಮಜನ್ಮಭೂಮಿ ಆಂದೋಲನದಲ್ಲಿ ಬಹುದೊಡ್ಡ ಪಾತ್ರ ವಹಿಸಿದ್ದ ಪ್ರಮುಖ ಹಿಂದೂ ಧಾರ್ಮಿಕ ಸಂತ ಆಚಾರ್ಯ ಸ್ವಾಮಿ ಧರ್ಮೇಂದ್ರ ಇಂದು (ಸೋಮವಾರ) ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಪೀಡಿತರಾಗಿದ್ದ ಅವರನ್ನು ಚಿಕಿತ್ಸೆಗಾಗಿ ಇಲ್ಲಿನ ಸವಾಯ್ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ಒಂದು ತಿಂಗಳಿನಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು.

ಹಿಂದೂಸ್ತಾನ್ ಸಮಾಚಾರ್


 rajesh pande