ಹಾಸ್ಯನಟ ರಾಜು ಶ್ರೀವಾಸ್ತವ ಇಂದು ನಿಧನ
ನವ ದೆಹಲಿ, 21 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ಬಾಲಿವುಡ್ನ ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ದೆಹಲಿಯಲ್ಲಿ ಇಂದ
ಹಾಸ್ಯನಟ ರಾಜು ಶ್ರೀವಾಸ್ತವ ಇಂದು ನಿಧನ


ನವ ದೆಹಲಿ, 21 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ಬಾಲಿವುಡ್ನ ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ದೆಹಲಿಯಲ್ಲಿ ಇಂದು ನಿಧನರಾಗಿದ್ದಾರೆ. ಅವರಿಗೆ ೫೮ ವರ್ಷ ವಯಸ್ಸಾಗಿತ್ತು. ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಕಳೆದ ತಿಂಗಳು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಶ್ರೀವಾಸ್ತವ ಅವರು ತಮ್ಮ ನಟನಾ ಕೌಶಲ್ಯದಿಂದ ಜನರಿಗೆ ಮನರಂಜನೆ ನೀಡುತ್ತಿದ್ದರು. ಅವರ ನೆನಪು ಜನರ ಮನಸ್ಸಲ್ಲಿ ಸದಾ ಉಳಿಯಲಿದೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ರಾಜು ಅವರ ನಿಧನಕ್ಕೆ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಅನುರಾಗ್ ಸಿಂಗ್ ಠಾಕೂರ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande