ಶಿಷ್ಯ ವೇತನಕ್ಕಾಗಿ ಅರ್ಜಿ
ಬಳ್ಳಾರಿ, 22 ಸೆಪ್ಟೆಂಬರ್ (ಹಿ.ಸ): ಆ್ಯಂಕರ್: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ ಅಲ್ಪಸಂಖ್ಯಾ
ಶಿಷ್ಯ ವೇತನಕ್ಕಾಗಿ ಅರ್ಜಿ


ಬಳ್ಳಾರಿ, 22 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ

2022-23ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿಗಳನ್ನು ಕಡ್ಡಾಯವಾಗಿ ಸೇವಾ ಸಿಂಧು ತಂತ್ರಾಂಶದಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.20 ಆಗಿರುತ್ತದೆ.

ಷರತ್ತುಗಳು: ವಿದ್ಯಾರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1 ರೂ.2.50ಲಕ್ಷ ಹಾಗೂ ಪ್ರವರ್ಗ 2ಎ, 2ಬಿ, 3ಬಿ, ರೂ.2ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜಿನಿಂದ 5 ಕಿ.ಮೀ ದೂರದವರಾಗಿರಬೇಕು.

ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದಲ್ಲಿ, ಅವರು ಬೇರೆ ನಗರ/ಪಟ್ಟಣದಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ(ಒಂದೇ ನಗರದ ವ್ಯಾಪ್ತಿಯಲ್ಲಿ ಇರುವವರು ಅರ್ಹರಿರುವುದಿಲ್ಲ). ಈ ಯೋಜನೆಯಡಿ ಸಹಾಯಧನ ಆಯಾ ವರ್ಷಕ್ಕೆ ಲಭ್ಯವಿರುವ ಅನುದಾನ ಹಾಗೂ ಭೌತಿಕ ಗುರಿಗೆ ತಕ್ಕಂತೆ ಸ್ವೀಕೃತವಾದ ಅರ್ಹ ಅರ್ಜಿಗಳಲ್ಲಿ ಹಿಂದಿನ ವರ್ಷದ ವಾರ್ಷಿಕ/ಸೆಮಿಸ್ಟರ್ ತರಗತಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಇಳಿಕೆ ಕ್ರಮಾನುಸಾರ (ಕಟ್ ಆಫ್ ಅಂಕಗಳು) ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕೋರ್ಸುಗಳ ಆಧಾರದ ಮೇಲೆ ಮಂಜೂರು ಮಾಡಲಾಗುವುದು. ಮುಕ್ತ ವಿಶ್ವವಿದ್ಯಾಲಯ/ದೂರ ಶಿಕ್ಷಣ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ.

ಅಭ್ಯರ್ಥಿಗಳು ಸೇವಾಸಿಂದು ಪೋರ್ಟಲ್ https;evasindu.karnataka.gov.in ಮೂಲಕ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರದ ವಿಳಾಸ: ಬಳ್ಳಾರಿ ತಾಲೂಕು ವ್ಯಾಪ್ತಿಯ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊ.8310321101, ಹೊಸಪೇಟೆ ತಾಲೂಕಿನ ವಿಎನ್ಸಿ ಕಾಲೇಜಿನ ಪರ್ವೇಜ್ ಪ್ಲಾಜಾ 1ನೇ ಮಹಡಿಯ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮೊ.8050435366, ಸಂಡೂರು ತಾಲೂಕಿನ

ತೋಟಗಾರಿಗೆ ಇಲಾಖೆÉಯ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮೊ.9036925966/ 8660575061, ಸಿರುಗುಪ್ಪ ತಾಲೂಕಿನ ನಗರಸಭೆ ಆವರಣದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮೊ.9148889975, ಹೂವಿನಹಡಗಲಿ ತಾಲೂಕಿನ ತಾಲೂಕು ತಾಲ್ಲೂಕು ಪಂಚಾಯಿತಿ ಆವರಣದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮೊ.7353696984, ಹಗರಿಬೊಮ್ಮನಹಳ್ಳಿ ತಾಲೂಕಿನ ಶಾಲಿ ನಗರದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮೊ.9980237242, ಕೂಡ್ಲಿಗಿ ತಾಲೂಕಿನ ತಾಲೂಕು ಪಂಚಾಯಿತಿ ಆವರಣದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮೊ.9060330060, ಹರಪನಹಳ್ಳಿ ತಾಲೂಕಿನ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮೊ.8494927891 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಸಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200215/224 ಗೆ ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.


 rajesh pande