ಆಹಾರ ಧಾನ್ಯ ಬಿಡುಗಡೆ
ಕೂಡ್ಲಿಗಿ, 22 ಸೆಪ್ಟೆಂಬರ್ (ಹಿ.ಸ): ಆ್ಯಂಕರ್: ಜಿಲ್ಲೆಯ ಕೂಡ್ಲಿಗಿ ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಸೆಪ್ಟಂಬರ್
ಆಹಾರ ಧಾನ್ಯ ಬಿಡುಗಡೆ


ಕೂಡ್ಲಿಗಿ, 22 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್: ಜಿಲ್ಲೆಯ ಕೂಡ್ಲಿಗಿ ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಸೆಪ್ಟಂಬರ್ ಮಾಹೆಗೆ ಪಡಿತರ ಧಾನ್ಯವನ್ನು ಫಲಾನುಭವಿಗಳಿಗೆ ವಿತರಿಸಲು ಆಹಾರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಕೂಡ್ಲಿಗಿ ತಾಲೂಕಿನ ತಹಶೀಲ್ದಾರರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ 2022ನೇ ಸೆಪ್ಟಂಬರ್ ತಿಂಗಳಿಗೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆಜಿ ರಾಗಿ ಹಾಗೂ ಆದ್ಯತಾ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 05 ಕೆಜಿ ರಾಗಿ ವಿತರಿಸಲಾಗುವುದು ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಹಾಗೂ ಆದ್ಯತಾ ಪಡಿತರ ಚೀಟಿ(ಬಿಪಿಎಲ್)ಗೆ ಪ್ರತಿ ಸದಸ್ಯನಿಗೆ ಅಕ್ಕಿ-05 ಕೆ.ಜಿ ನೀಡಲಾಗುವುದು.

ಪ್ರಸ್ತುತ ಮಾಹೆಯಿಂದ ಅನ್ನಭಾಗ್ಯ ಯೋಜನೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಿಸಲು ಪ್ರತ್ಯೇಕವಾಗಿ ಎರಡು ಬಾರಿ ಬೆರಳಚ್ಚು ಗುರುತು ನೀಡುವುದು ಕಡ್ಡಾಯವಾಗಿರುತ್ತದೆ.

ಆದ್ದರಿಂದ ಕಾರ್ಡುದಾರರು ಪಡಿತರ ಚೀಟಿಯೊಂದಿಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ತಮಗೆ ಹಂಚಿಕೆಯಾಗಿರುವ ಪಡಿತರವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಯಾವುದೇ ಕಾರಣಕ್ಕೂ ಕಾಳಸಂತೆಯಲ್ಲಿ ಮಾರಾಟ ಮಾಡಬಾರದು. ಇದು ಕಾನೂನು ಬಾಹಿರವಾಗಿದೆ. ಒಂದೊಮ್ಮೆ ಈ ರೀತಿಯ ಪ್ರಕರಣಗಳು ಕಂಡುಬಂದಲ್ಲಿ ಅಂಥವರ ಪಡಿತರ ಚೀಟಿಯನ್ನು ಅಮಾನತ್ತು ಮಾಡಲು ಇಲಾಖೆ ವತಿಯಿಂದ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕೂಡ್ಲಿಗಿಯ ತಹಶೀಲ್ದಾರರ ಕಚೇರಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.


 rajesh pande