ಕೊಪ್ಪಳ, 22 ಸೆಪ್ಟೆಂಬರ್ (ಹಿ.ಸ):
ಆ್ಯಂಕರ್: ಕೊಪ್ಪಳ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಹಯೋಗದಲ್ಲಿ 2022-23ನೇ ಸಾಲಿನ `ಕೊಪ್ಪಳ ತಾಲ್ಲೂಕ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟ’ವನ್ನು ಇದೇ ಸೆ. 23 ಮತ್ತು 24 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮ ಸೆ. 23 ರಂದು ಬೆಳಿಗ್ಗೆ 09 ಗಂಟೆಗೆ ನಡೆಯಲಿದೆ.
ಕೊಪ್ಪಳ ತಾಲ್ಲೂಕ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟದ ಅಂಗವಾಗಿ ಸೆ. 23 ರಂದು ಪ್ರೌಢ ಶಾಲೆಗಳ ಕ್ರೀಡಾಕೂಟ ಮತ್ತು ಸೆ. 24 ರಂದು ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ನಡೆಯಲಿದೆ ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.